ಚೀನಾ, ನ. 13 (DaijiworldNews/AA): ಚೀನಾದ ಜಿಯಾಂಗ್ಸು ಪ್ರಾಂತ್ಯದ ಜಾಂಗ್ಜಿಯಾಗ್ಯಾಂಗ್ನಲ್ಲಿರುವ 1,500 ವರ್ಷಗಳಷ್ಟು ಹಳೆಯದಾದ ಯೋಂಗ್ಕಿಂಗ್ ದೇವಾಲಯದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಇದಕ್ಕೆ ಸಂಬಂಧಿಸಿದ ವಿಡಿಯೋ ವೈರಲ್ ಆಗಿದೆ.

ಶತಮಾನಗಳಷ್ಟು ಹಳೆಯದಾದ ಬೌದ್ಧ ವಾಸ್ತುಶಿಲ್ಪ ಮತ್ತು ಆಧ್ಯಾತ್ಮಿಕ ಮಹತ್ವಕ್ಕೆ ಹೆಸರುವಾಸಿಯಾದ ಈ ಪ್ರಾಚೀನ ದೇವಾಲಯದ, ಸಂಕೀರ್ಣದೊಳಗಿನ ಬಹುಮಹಡಿ ಮಂಟಪಗಳು ಸುಟ್ಟುಹೋಗಿವೆ. ಬೆಂಕಿಯನ್ನು ಬಹುತೇಕ ನಿಯಂತ್ರಣಕ್ಕೆ ತರಲಾಗಿದ್ದು, ಇಲ್ಲಿಯವರೆಗೆ ಯಾವುದೇ ಸಾವುನೋವುಗಳು ಸಂಭವಿಸಿಲ್ಲ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.
ಮಾಹಿತಿ ಪಡೆದ ತಕ್ಷಣ ಅಗ್ನಿಶಾಮಕ ದಳ ಮತ್ತು ತುರ್ತು ತಂಡಗಳು ಸ್ಥಳಕ್ಕೆ ಆಗಮಿಸಿವೆ. ಪ್ರಸ್ತುತ ಘಟನೆಯ ಕಾರಣವನ್ನು ತನಿಖೆ ನಡೆಸಲಾಗುತ್ತಿದ್ದು, ದೋಷಪೂರಿತ ವೈರಿಂಗ್, ಧೂಪದ್ರವ್ಯ ಬಳಕೆ ಕಾರಣ ಎನ್ನುವ ತನಿಖೆ ನಡೆಸಲಾಗುತ್ತಿದೆ.