ಕಾಬೂಲ್, ನ. 25 (DaijiworldNews/AA): ಅಫ್ಘಾನಿಸ್ತಾನದ ಖೋಸ್ಟ್, ಕುನಾರ್ ಮತ್ತು ಪಕ್ತಿಕಾ ಪ್ರಾಂತ್ಯಗಳಲ್ಲಿ ಪಾಕಿಸ್ತಾನವು ಸೋಮವಾರ ರಾತ್ರಿಯಿಡೀ ವೈಮಾನಿಕ ದಾಳಿ ನಡೆಸಿದೆ. 9 ಮಕ್ಕಳು ಮತ್ತು ಒಬ್ಬ ಮಹಿಳೆಯನ್ನು ಕೊಂದಿದೆ ಎಂದು ಅಫ್ಘಾನಿಸ್ತಾನದ ತಾಲಿಬಾನ್ ಸರ್ಕಾರ ಆರೋಪ ಮಾಡಿದೆ.

"ಪಾಕಿಸ್ತಾನವು ಖೋಸ್ಟ್ ಪ್ರಾಂತ್ಯದ ನಾಗರಿಕನ ಮನೆಯ ಮೇಲೆ ಬಾಂಬ್ ದಾಳಿ ಮಾಡಿ 9 ಮಕ್ಕಳು ಮತ್ತು ಒಬ್ಬ ಮಹಿಳೆಯನ್ನು ಕೊಂದಿದೆ. 9 ಮಕ್ಕಳು ಸೇರಿದಂತೆ 10 ಜನರ ಹತ್ಯೆಗೆ ತಕ್ಕ ಪ್ರತೀಕಾರ ತೀರಿಸಿಕೊಳ್ಳುತ್ತೇವೆ" ಎಂದು ಅಫ್ಘಾನಿಸ್ತಾನದ ತಾಲಿಬಾನ್ ಸರ್ಕಾರವು ಎಚ್ಚರಿಕೆ ನೀಡಿದೆ.
ಕುನಾರ್ ಮತ್ತು ಪಕ್ತಿಕಾ ಪ್ರಾಂತ್ಯಗಳಲ್ಲಿ ಹೆಚ್ಚುವರಿ ದಾಳಿಗಳನ್ನು ನಡೆಸಲಾಯಿತು. ಇದರಿಂದ ಇತರ ನಾಲ್ಕು ಮಂದಿ ಗಾಯಗೊಂಡಿದ್ದಾರೆ. 9 ಮಕ್ಕಳ ಮೃತದೇಹಗಳು ನೆಲದ ಮೇಲೆ ಬಿದ್ದಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.
ಅಕ್ಟೋಬರ್ನಲ್ಲಿ ಕತಾರ್ ಮತ್ತು ಟರ್ಕಿ ಮಧ್ಯಸ್ಥಿಕೆಯಲ್ಲಿ ಪಾಕ್ ಹಾಗೂ ಅಫ್ಘಾನ್ ಎರಡೂ ದೇಶಗಳ ನಡುವೆ ಕದನ ವಿರಾಮ ಘೋಷಿಸಲಾಗಿತ್ತು. ಆದರೂ ಅಫ್ಘಾನಿಸ್ತಾನದೊಳಗೆ ಪಾಕಿಸ್ತಾನ ರಾತ್ರಿಯಿಡೀ ದಾಳಿ ನಡೆಸಿದೆ.