ಅಡಿಸ್ ಅಬಾಬಾ, ಡಿ. 17 (DaijiworldNews/AA): ಇಥಿಯೋಪಿಯಾದ ಪ್ರಧಾನಿ ಅಬಿ ಅಹ್ಮದ್ ಅಲಿ ಭಾರತದ ಪ್ರಧಾನಿ ನರೇಂದ್ರ ಮೋದಿಯವರೆಗೆ ಇಥಿಯೋಪಿಯಾದ ಅತ್ಯುನ್ನತ ಗೌರವ 'ದಿ ಗ್ರೇಟ್ ಆನರ್ ನಿಶಾನ್ ಆಫ್ ಇಥಿಯೋಪಿಯಾ' ನೀಡಿ ಗೌರವಿಸಿದ್ದಾರೆ.

ಅಡಿಸ್ ಅಂತಾರಾಷ್ಟ್ರೀಯ ಸಮಾವೇಶ ಕೇಂದ್ರದಲ್ಲಿ ಆಯೋಜಿಸಲಾದ ವಿಶೇಷ ಸಮಾರಂಭದಲ್ಲಿ, ಭಾರತ-ಇಥಿಯೋಪಿಯಾ ಪಾಲುದಾರಿಕೆಯನ್ನು ಬಲಪಡಿಸುವಲ್ಲಿ ಅವರ ಅಸಾಧಾರಣ ಕೊಡುಗೆಗಾಗಿ ಮತ್ತು ಜಾಗತಿಕ ರಾಜಕಾರಣಿಯಾಗಿ ಅವರ ದೂರದೃಷ್ಟಿಯ ನಾಯಕತ್ವಕ್ಕಾಗಿ ಇಥಿಯೋಪಿಯಾದ ಪ್ರಧಾನಿ ಅಬಿ ಅಹ್ಮದ್ ಅಲಿ ಪ್ರಧಾನಿ ಮೋದಿ ಅವರಿಗೆ ಅತ್ಯುನ್ನತ ಪ್ರಶಸ್ತಿಯನ್ನು ಪ್ರದಾನ ಮಾಡಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ನವದೆಹಲಿಯಲ್ಲಿ ಹೇಳಿಕೆಯಲ್ಲಿ ತಿಳಿಸಿದೆ.
ಪ್ರಧಾನಿ ನರೇಂದ್ರ ಮೋದಿ ಇಥಿಯೋಪಿಯಾ ಸೇರಿದಂತೆ ಮೂರು ದೇಶಗಳ ಪ್ರವಾಸದಲ್ಲಿದ್ದಾರೆ. ಇನ್ನು ಪ್ರಧಾನಿ ಮೋದಿಗೆ 'ದಿ ಗ್ರೇಟ್ ಆನರ್ ನಿಶಾನ್ ಆಫ್ ಇಥಿಯೋಪಿಯಾ' ಪ್ರಶಸ್ತಿ ಪ್ರದಾನ ಮಾಡಿರುವುದು ಭಾರತ-ಇಥಿಯೋಪಿಯಾ ಸಂಬಂಧದಲ್ಲಿ ಮಹತ್ವದ ಮೈಲಿಗಲ್ಲಾಗಿದೆ.