ವಾಷಿಂಗ್ಟನ್, ಜ. 12 (DaijiworldNews/AK): ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನ ಇತ್ತೀಚಿನ ಹೇಳಿಕೆಗಳನ್ನು ನೋಡಿದಾಗ ವೆನೆಜುವೆಲಾದ ತೈಲ ಮಾತ್ರವಲ್ಲ, ದೇಶದ ಕೀಲಿಕೈ ಕೂಡ ಎಂಬುದು ಸ್ಪಷ್ಟವಾಗುತ್ತಿದೆ. ಅಮೆರಿಕವು ಇತ್ತೀಚೆಗೆ ವೆನೆಜುವೆಲಾ ವಿರುದ್ಧ ಮಿಲಿಟರಿ ದಾಳಿ ನಡೆಸಿ, ಅದರ ಅಧ್ಯಕ್ಷ ನಿಕೋಲಸ್ ಮಡುರೊ ಅವರನ್ನು ಬಂಧಿಸಿತ್ತು.

ಈಗ ಅಷ್ಟೇ ಅಲ್ಲ ಡೊನಾಲ್ಡ್ ಟ್ರಂಪ್ ತಮ್ಮನ್ನು ವೆನೆಜುವೆಲಾದ ಹಂಗಾಮಿ ಅಧ್ಯಕ್ಷ ಎಂದು ಘೋಷಿಸಿಕೊಂಡಿರುವುದು ಅಚ್ಚರಿಯನ್ನುಂಟು ಮಾಡಿದೆ. ಅವರು ತಮ್ಮ ಟ್ರುತ್ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಇದರ ಫೋಟೋವನ್ನು ಹಂಚಿಕೊಂಡಿದ್ದಾರೆ. ಇದಕ್ಕೆ ಜನರು ನಿಜವಾಗಿಯೂ ನಿಮಗೆ ಬೇಕಾಗಿರುವುದು ಏನು ಎಂದು ಟ್ರಂಪ್ರನ್ನು ಪ್ರಶ್ನೆ ಮಾಡಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡ ಪೋಸ್ಟ್ನಲ್ಲಿ, ಅಮೆರಿಕದ ಅಧ್ಯಕ್ಷ ಟ್ರಂಪ್ ತಮ್ಮನ್ನು “ವೆನೆಜುವೆಲಾದ ಹಂಗಾಮಿ ಅಧ್ಯಕ್ಷರು” ಎಂದು ಬಣ್ಣಿಸಿಕೊಂಡಿದ್ದಾರೆ.
ದೇಶದ ಉಪಾಧ್ಯಕ್ಷೆ ಡೆಲ್ಸಿ ರೊಡ್ರಿಗಸ್ ಅವರನ್ನು ವೆನೆಜುವೆಲಾದ ಮಧ್ಯಂತರ ಅಧ್ಯಕ್ಷರನ್ನಾಗಿ ನೇಮಿಸಲಾಗಿತ್ತು.ಈ ಪೋಸ್ಟ್ ತ್ವರಿತವಾಗಿ ವೈರಲ್ ಆಗಿದ್ದು, ಜನರು ಟ್ರಂಪ್ ಅವರ ಉದ್ದೇಶಗಳನ್ನು ಪ್ರಶ್ನಿಸಿದ್ದಾರೆ.