ಟೆಹ್ರಾನ್, ಮಾ. 02 (DaijiworldNews/AA): ಅಮೆರಿಕ (ಯುಎಸ್) ಮತ್ತು ಇಸ್ರೇಲ್ ನಡೆಸಿದ ದಾಳಿಯಲ್ಲಿ ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಪತ್ನಿ ಮನ್ಸೌರೆಹ್ ಖೋಜಸ್ತೆಹ್ ಬಘರ್ಜಾದೆಹ್(78) ಅವರು ಸೋಮವಾರ ನಿಧನರಾಗಿದ್ದಾರೆ.

ಎರಡು ದಿನಗಳ ಹಿಂದೆ ಅಮೆರಿಕ ಮತ್ತು ಇಸ್ರೇಲ್ ದಾಳಿಯಲ್ಲಿ ಖಮೇನಿ ಸೇರಿದಂತೆ ಅವರ ಮಗಳು, ಅಳಿಯ ಮತ್ತು ಮೊಮ್ಮಗಳು ಸೇರಿದಂತೆ ಅವರ ಕುಟುಂಬದ ಹಲವಾರು ಸದಸ್ಯರು ಸಾವನ್ನಪ್ಪಿದ್ದರು. ಇದೀಗ ದಾಳಿಯಲ್ಲಿ ಗಾಯಗೊಂಡಿದ್ದ ಖಮೇನಿ ಪತ್ನಿ ಕೂಡ ಸಾವನ್ನಪ್ಪಿದ್ದಾರೆ ಎಂದು ಇರಾನ್ ಮಾಧ್ಯಮಗಳು ವರದಿ ಮಾಡಿದೆ.
ಟೆಹ್ರಾನ್ ಮತ್ತು ಸುತ್ತಮುತ್ತಲಿನ ಅನೇಕ ಸ್ಥಳಗಳನ್ನು ಗುರಿಯಾಗಿಸಿಕೊಂಡು ಅಮೆರಿಕ-ಇಸ್ರೇಲ್ ಜಂಟಿ ದಾಳಿ ನಡೆಸಿತ್ತು. ಈ ದಾಳಿ ಆರಂಭವಾದ ಮೊದಲ ದಿನವೇ ಖಮೇನಿಯನ್ನು ಹತ್ಯೆ ಮಾಡಲಾಗಿತ್ತು.