ಕತಾರ್, ಮಾ. 04 (DaijiworldNews/AA): 10 ಮಂದಿ ಶಂಕಿತ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ನ (ಐಆರ್ಜಿಸಿ) ಗೂಢಚಾರರನ್ನು ಕತಾರ್ನಲ್ಲಿ ಬಂಧಿಸಲಾಗಿದೆ.

ದೇಶದ ನಿರ್ಣಾಯಕ ಮತ್ತು ಮಿಲಿಟರಿ ಮೂಲಸೌಕರ್ಯದ ಬಗ್ಗೆ ಗುಪ್ತಚರ ಮಾಹಿತಿ ಸಂಗ್ರಹಿಸಲು ಏಳು ಶಂಕಿತರಿಗೆ ಬೇಹುಗಾರಿಕೆ ಕಾರ್ಯಾಚರಣೆಗಳನ್ನು ವಹಿಸಲಾಗಿತ್ತು. ಬೇಹುಗಾರಿಕೆ ಆರೋಪ ಹೊತ್ತಿರುವ ಇತರ ಮೂವರು ಡ್ರೋನ್ಗಳನ್ನು ನಿರ್ವಹಿಸುವಲ್ಲಿ ತರಬೇತಿ ಪಡೆದಿದ್ದರು. ಈ ಹಿನ್ನೆಲೆ 10 ಮಂದಿಯನ್ನು ಬಂಧಿಸಿರುವುದಾಗಿ ವರದಿಯಾಗಿದೆ.
ತನಿಖೆಯ ವೇಳೆ ಶಂಕಿತರು ಇರಾನಿನ ರೆವಲ್ಯೂಷನರಿ ಗಾರ್ಡ್ನೊಂದಿಗೆ ಸಂಪರ್ಕದಲ್ಲಿರುವುದನ್ನು ಒಪ್ಪಿಕೊಂಡಿದ್ದಾರೆ. ಜೊತೆಗೆ ಅವರನ್ನು ಬೇಹುಗಾರಿಕೆ ಮತ್ತು ವಿಧ್ವಂಸಕ ಕಾರ್ಯಾಚರಣೆಗಳನ್ನು ನಡೆಸಲು ನಿಯೋಜಿಸಲಾಗಿತ್ತು ಎಂದು ತಿಳಿಸಿದ್ದಾರೆ.