ಟೆಹ್ರಾನ್, ಏ. 03 (DaijiworldNews/AA): ಅಮೆರಿಕ - ಇಸ್ರೇಲ್ ದಾಳಿಯಲ್ಲಿ ಇರಾನ್ನ ನೌಕಾಪಡೆಯ ಉಪ ಗುಪ್ತಚರ ಮುಖ್ಯಸ್ಥ ಬೆಹ್ನಾಮ್ ರೆಝಾಯ್ ಅವರ ಹತ್ಯೆಯಾಗಿರುವುದಾಗಿ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ ಖಚಿತಪಡಿಸಿದೆ.

ಬೆಹ್ನಾಮ್ ರೆಝಾಯ್ ಅವರು ಇರಾನ್ನ ಮಿಲಿಟರಿ ಕಾರ್ಯಾಚರಣೆಯಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಸಮುದ್ರ ಬೆದರಿಕೆಗಳನ್ನು ಮೇಲ್ವಿಚಾರಣೆ ಮಾಡುವ ಮತ್ತು ಪ್ರಾದೇಶಿಕ ಸಮುದ್ರದಾದ್ಯಂತ ಕಾರ್ಯತಂತ್ರದ ಮಾಹಿತಿಯನ್ನು ಸಂಗ್ರಹಿಸುವ ಜವಾಬ್ದಾರಿಯನ್ನು ಹಾಗೂ ಗುಪ್ತಚರ ಕಾರ್ಯಾಚರಣೆಗಳನ್ನು ಮುನ್ನಡೆಸಿದ್ದರು ಎಂದು ತಿಳಿದುಬಂದಿದೆ.
ಅಮೆರಿಕ, ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧ ಎರಡನೇ ತಿಂಗಳಿಗೆ ಕಾಲಿಟ್ಟಿದೆ. ಇರಾನ್ನಲ್ಲಿ ಇಲ್ಲಿವರೆಗೆ ಯುದ್ಧದಿಂದ ಹಿರಿಯ ಅಧಿಕಾರಿಗಳು ಮತ್ತು ಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಸೇರಿದಂತೆ 1,340 ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ.