ಢಾಕಾ, ಏ. 07 (DaijiworldNews/AA): ಬಾಂಗ್ಲಾದೇಶದ ಮಾಜಿ ಸ್ಪೀಕರ್ ಶಿರಿನ್ ಶರ್ಮಿನ್ ಚೌಧರಿ ಅವರನ್ನ ಢಾಕಾ ಮೆಟ್ರೋಪಾಲಿಟನ್ ಪೊಲೀಸರ ಪತ್ತೇದಾರಿ ವಿಭಾಗವು (ಡಿಬಿ) ಇಂದು ಬಂಧಿಸಿದೆ.

ಶಿರಿನ್ ಅವರನ್ನ ಢಾಕಾದ ಧನ್ಮಂಡಿಯ 8/ಎ ರಸ್ತೆಯಲ್ಲಿರುವ ಅವರ ನಿವಾಸದಲ್ಲಿ ಬಂಧಿಸಲಾಗಿದೆ. ವಿದ್ಯಾರ್ಥಿ ಚಳವಳಿಗೆ ಸಂಬಂಧಿಸಿದಂತೆ ದಾಖಲಾದ ಪ್ರಕರಣವೊಂದರ ಅಡಿಯಲ್ಲಿ ಅವರನ್ನು ಬಂಧಿಸಲಾಗಿದೆ ಎಂದು ಪತ್ತೇದಾರಿ ವಿಭಾಗದ ಹೆಚ್ಚುವರಿ ಕಮಿಷನರ್ ಮೊಹಮ್ಮದ್ ಶಫೀಕುಲ್ ಇಸ್ಲಾಂ ತಿಳಿಸಿದ್ದಾರೆ.
ಶಿರಿನ್ ಅವರು ಬಾಂಗ್ಲಾದೇಶದ ಮೊದಲ ಮಹಿಳಾ ಸ್ಪೀಕರ್ ಆಗಿ 2013 ರಿಂದ 2024ರ ಆಗಸ್ಟ್ ವರೆಗೆ ಕಾರ್ಯ ನಿರ್ವಹಿಸಿದ್ದರು. 2025ರ ಆಗಸ್ಟ್ ೫ರಂದು ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ಸರ್ಕಾರ ಪತನಗೊಂಡ 27 ದಿನಗಳ ನಂತರ ಚೌಧರಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದರೊಂದಿಗೆ ಅವರ ದೀರ್ಘಕಾಲದ ಸಂಸದೀಯ ಪಯಣ ಅಂತ್ಯಗೊಂಡಿತ್ತು.