ವಾಷಿಂಗ್ಟನ್, ಏ. 09 (DaijiworldNews/AA): ಕದನ ವಿರಾಮ ಮುರಿಯುವ ತನಕ ಮಾತ್ರ ಇರಾನ್ನ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳು ಸುರಕ್ಷಿತವಾಗಿ ಇರಲಿವೆ. ಒಂದು ವೇಳೆ ಒಪ್ಪಂದ ಮುರಿದಿದ್ದೇ ಆದರೆ, ಭಾರೀ ದಾಳಿ ಸಂಭವಿಸಲಿದೆ. ಆ ದಾಳಿ ಹಿಂದೆಂದಿಗಿಂತಲೂ ಭೀಕರವಾಗಿರಲಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್ಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಇನ್ನು ಮುಂದೆ ಹಾರ್ಮುಜ್ ಜಲಸಂಧಿ ಸುರಕ್ಷಿತವಾಗಿ ಮತ್ತು ಮುಕ್ತವಾಗಿ ಇರಲಿದೆ. ಇರಾನ್ ಪರಮಾಣು ಶಸ್ತ್ರಾಸ್ತ್ರಗಳನ್ನು ಹೊಂದುವುದಿಲ್ಲ. ಅಲ್ಲದೇ ಒಪ್ಪಂದವನ್ನು ಅಂತಿಮಗೊಳಿಸುವವರೆಗೆ ಇರಾನ್ ಮತ್ತು ಸುತ್ತಮುತ್ತ ಅಮೆರಿಕದ ಪಡೆಗಳನ್ನು ನಿಯೋಜಿಸಲಾಗುವುದು. ನಮ್ಮ ಸೇನೆ ಲೋಡ್ ಆಗುತ್ತಿದೆ ಮತ್ತು ವಿಶ್ರಾಂತಿ ಪಡೆಯುತ್ತಿದೆ. ವಾಸ್ತವವಾಗಿ, ಅದು ಮುಂದಿನ ವಿಜಯಕ್ಕಾಗಿ ಎದುರು ನೋಡುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಏ.7 ರಂದು ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧಕ್ಕೆ 14 ದಿನಗಳ ಕದನ ವಿರಾಮ ಘೋಷಣೆಯಾಗಿತ್ತು. ಕದನ ವಿರಾಮ ಘೋಷಣೆಗೂ ಮುನ್ನ ಇರಾನ್ 10 ಷರತ್ತುಗಳನ್ನು ವಿಧಿಸಿದೆ.