ಇಸ್ರೇಲ್, ಏ. 09 (DaijiworldNews/AA): ಇರಾನ್ ಮತ್ತು ಅಮೆರಿಕ ನಡುವೆ 14 ದಿನಗಳ ಕದನ ವಿರಾಮ ಘೋಷಣೆಯಾಗಿದ್ದು, ಈ ನಡುವೆ ಹಿಜ್ಬುಲ್ಲಾ ಮುಖ್ಯಸ್ಥ ನಯೀಮ್ ಖಾಸಿಮ್ನನ್ನು ಹತ್ಯೆ ಮಾಡಿರುವುದಾಗಿ ಇಸ್ರೇಲ್ ಹೇಳಿಕೊಂಡಿದೆ.

ಇಸ್ರೇಲ್ ಲೆಬನಾನ್ನ ಹಿಜ್ಬೊಲ್ಲಾ ಮೇಲೆ ಭಾರೀ ದಾಳಿ ನಡೆಸುತ್ತಿದೆ. ಈ ದಾಳಿಯಲ್ಲಿ ಖಾಸಿಮ್ ಸಾವನ್ನಪ್ಪಿದ್ದಾನೆ ಎಂದು ಶಂಕಿಸಲಾಗಿದೆ. ಬೈರುತ್ನಲ್ಲಿ ನಡೆದ ಗುರಿ ದಾಳಿಯಲ್ಲಿ ಖಾಸಿಮ್ ಹತ್ಯೆಯಾಗಿದ್ದಾನೆ.
ಈ ದಾಳಿಗಳಲ್ಲಿ 250 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಫೆಬ್ರವರಿ 28 ರಂದು ಭುಗಿಲೆದ್ದ ಈ ಸಂಘರ್ಷವು ಅದೇ ದಿನ ನಡೆದ ಬೃಹತ್ ವಾಯುದಾಳಿಯಲ್ಲಿ ಇರಾನ್ ಸರ್ವೋಚ್ಛ ನಾಯಕ ಅಯತೊಲ್ಲಾ ಖಮೇನಿ ಸಾವನ್ನಪ್ಪಿದ್ದರು. ಇದರ ನಂತರ ಇರಾನ್ನ ರಾಷ್ಟ್ರೀಯ ಭದ್ರತಾ ಮಂಡಳಿಯ ಮುಖ್ಯಸ್ಥ ಅಲಿ ಲಾರಿಜಾನಿ, ಐಆರ್ಜಿಸಿ ಕಮಾಂಡರ್-ಇನ್-ಚೀಫ್ ಮೊಹಮ್ಮದ್ ಪಕ್ಪೂರ್ ಅವರನ್ನು ಕೂಡ ಹತ್ಯೆ ಮಾಡಲಾಗಿತ್ತು.