ವಾಷಿಂಗ್ಟನ್, ಜೂ. 12 (DaijiworldNews/AK): ಈ ವಾರಾಂತ್ಯದಲ್ಲಿ ಶಾಂತಿ ಒಪ್ಪಂದಕ್ಕೆ ಇರಾನ್ ಸಹಿ ಹಾಕಬಹುದು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಶಯ ವ್ಯಕ್ತಪಡಿಸಿದ್ದಾರೆ.

ಓವಲ್ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಟ್ರಂಪ್, ಇರಾನ್ ಜೊತೆಗಿನ ಯುದ್ಧ ಕೊನೆಗಾಣಿಸಲು ನಾವು ಉತ್ತಮ ಒಪ್ಪಂದ ಮಾಡಿಕೊಂಡಿದ್ದೇವೆ ಎಂದು ಟ್ರಂಪ್ ತಿಳಿಸಿದ್ದಾರೆ. ಇದನ್ನೂಓದಿ: ಇಂದು ರಾತ್ರಿ ಅಮೆರಿಕದಿಂದ ಭೀಕರ ದಾಳಿ – ಇರಾನಿನ ಖಾರ್ಗ್ ದ್ವೀಪ ವಶ ಪಡೆಯುತ್ತೇವೆ: ಟ್ರಂಪ್ ಗುಡುಗು
ನಾವು ಶಾಂತಿ ಒಪ್ಪಂದಕ್ಕೆ ಸಹಿ ಹಾಕಿದ ತಕ್ಷಣ ಹಾರ್ಮುಜ್ ಜಲಸಂಧಿ ಅಧಿಕೃತವಾಗಿ ತೆರೆಯುತ್ತದೆ. ಅದು ಶೀಘ್ರದಲ್ಲೇ ಬಹಳ ಬೇಗ ಯುರೋಪ್ನಲ್ಲಿ ಈ ವಾರಂತ್ಯದಲ್ಲಿ ಆಗಲಿದೆ ಎಂದು ಹೇಳಿದ್ದಾರೆ.
ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ಮಾತನಾಡಿದ್ದೇನೆ. ಕತಾರ್, ಯುನೈಟೆಡ್ ಅರಬ್ ಎಮಿರೇಟ್ಸ್, ಸೌದಿ ಅರೇಬಿಯಾ, ಬಹ್ರೇನ್, ಕುವೈತ್ ಮತ್ತು ಇತರ ನಾಯಕರೊಂದಿಗೆ ಮಾತನಾಡಿದ್ದೇನೆ. ಶೀಘ್ರದಲ್ಲೇ ಟರ್ಕಿಯ ಅಧ್ಯಕ್ಷ ತಯ್ಯಿಪ್ ಎರ್ಡೋಗನ್ ಅವರೊಂದಿಗೆ ಮಾತನಾಡುವುದಾಗಿ ಟ್ರಂಪ್ ಮಾಹಿತಿ ನೀಡಿದ್ದಾರೆ.