ನ್ಯೂಜಿಲೆಂಡ್, ಜು. 11 (DaijiworldNews/AK): ಭಾರತ ಮತ್ತು ನ್ಯೂಜಿಲೆಂಡ್ ದೇಶಗಳು ಶನಿವಾರ ತಮ್ಮ ದ್ವಿಪಕ್ಷೀಯ ಬಾಂಧವ್ಯವನ್ನು ‘ಕಾರ್ಯತಂತ್ರದ ಪಾಲುದಾರಿಕೆ’ ಮಟ್ಟಕ್ಕೆ ಕೊಂಡೊಯ್ದಿವೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ನ್ಯೂಜಿಲೆಂಡ್ ಪ್ರಧಾನಿ ಕ್ರಿಸ್ಟೋಫರ್ ಲಕ್ಸನ್ ಅವರ ನಡುವೆ ನಡೆದ ಸುದೀರ್ಘ ಉನ್ನತ ಮಟ್ಟದ ಮಾತುಕತೆಯ ನಂತರ, ಮುಂದಿನ ಐದು ವರ್ಷಗಳಲ್ಲಿ ಅಂದರೆ 2030 ರ ವೇಳೆಗೆ ಉಭಯ ದೇಶಗಳ ನಡುವಿನ ವಾರ್ಷಿಕ ಸರಕು ಮತ್ತು ಸೇವಾ ವ್ಯಾಪಾರವನ್ನು ಬರೋಬ್ಬರಿ 35,000 ಕೋಟಿ ರೂಪಾಯಿಗಳಿಗೆ (7 ಬಿಲಿಯನ್ ನ್ಯೂಜಿಲೆಂಡ್ ಡಾಲರ್) ದ್ವಿಗುಣಗೊಳಿಸುವ ಐತಿಹಾಸಿಕ ಗುರಿಯನ್ನು ನಿಗದಿಪಡಿಸಲಾಗಿದೆ.
ಪ್ರಧಾನಿ ಮೋದಿಯವರ ಮೂರು ರಾಷ್ಟ್ರಗಳ ಪ್ರವಾಸದ ಅಂತಿಮ ಹಂತವಾಗಿ ಆಕ್ಲೆಂಡ್ಗೆ ಭೇಟಿ ನೀಡಿದ್ದು, ಚೀನಾದ ಪ್ರಭಾವ ಹೆಚ್ಚುತ್ತಿರುವ ಇಂಡೋ-ಪೆಸಿಫಿಕ್ ಪ್ರದೇಶದಲ್ಲಿ ಸಹಕಾರವನ್ನು ವಿಸ್ತರಿಸುವತ್ತ ಈ ಭೇಟಿ ಪ್ರಮುಖ ಗಮನ ಹರಿಸಿದೆ. ಇತ್ತೀಚೆಗೆ ಸಹಿ ಮಾಡಲಾದ ಮುಕ್ತ ವ್ಯಾಪಾರ ಒಪ್ಪಂದದ (FTA) ಯಶಸ್ವಿ ಅನುಷ್ಠಾನದ ಬಗ್ಗೆಯೂ ಇಬ್ಬರೂ
ಈ ಐತಿಹಾಸಿಕ ಸಭೆಯಲ್ಲಿ ಉಭಯ ದೇಶಗಳ ನಡುವೆ 10 ಮಹತ್ವದ ಒಪ್ಪಂದಗಳು ಸೇರಿದಂತೆ ಒಟ್ಟು 18 ಪ್ರಮುಖ ನಿರ್ಧಾರಗಳನ್ನು ಪ್ರಕಟಿಸಲಾಗಿದೆ. ಇಂಡೋ-ಪೆಸಿಫಿಕ್ ಸಾಮರಸ್ಯ, ನೌಕಾಪಡೆ ಮತ್ತು ನ್ಯೂಜಿಲೆಂಡ್ ರಕ್ಷಣಾ ಪಡೆಗಳ ನಡುವೆ ಪರಸ್ಪರ ಲಾಜಿಸ್ಟಿಕ್ಸ್ ಬೆಂಬಲ ಒಪ್ಪಂದಗಳು ಇದರಲ್ಲಿ ಸೇರಿವೆ. ನಾವು ಪ್ರತಿಯೊಂದು ವಲಯದಲ್ಲೂ ಸ್ಪಷ್ಟ ಗುರಿ ಮತ್ತು ಫಲಿತಾಂಶಗಳೊಂದಿಗೆ ಮುನ್ನಡೆಯಲಿದ್ದೇವೆ ಎಂದು ಪ್ರಧಾನಿ ಮೋದಿ ಮಾತುಕತೆಯ ನಂತರ ತಿಳಿಸಿದ್ದಾರೆ.