ಹನೋಯ್, ಜು. 11 (DaijiworldNews/AA): 32 ಮಂದಿ ಭಾರತೀಯ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ದೋಣಿ ಮುಳುಗಡೆಯಾದ ಪರಿಣಾಮ 15 ಮಂದಿ ಸಾವನ್ನಪ್ಪಿದ ಘಟನೆ ವಿಯೆಟ್ನಾಂನ ಫು ಕ್ವಾಕ್ ದ್ವೀಪದ ಬಳಿ ಶನಿವಾರ ನಡೆದಿದೆ.

ಫು ಕ್ವಾಕ್ ದ್ವೀಪದ ಬಳಿಯ ಹೊನ್ ಮೇ ರುಟ್ ನ್ಗೋಯ್ ಬಳಿ 32 ಭಾರತೀಯ ಭಾರತೀಯ ಪ್ರವಾಸಿಗರು, ನಾಲ್ವರು ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಸ್ಪೀಡ್ ಬೋಟ್ ಮಗುಚಿಬಿದ್ದಿದೆ. ಘಟನೆ ಬಳಿಕ ಸ್ಥಳೀಯ ಅಧಿಕಾರಿಗಳು ವ್ಯಾಪಕ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಗಳಿವೆ ಎನ್ನಲಾಗಿದೆ.
ಘಟನೆ ಬಳಿಕ ಸ್ಥಳೀಯ ಅಧಿಕಾರಿಗಳು ಬೃಹತ್ ರಕ್ಷಣಾ ಕಾರ್ಯಾಚರಣೆ ಪ್ರಾರಂಭಿಸಿದ್ದಾರೆ. ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ. ಅಲ್ಲದೇ ಕಂಟ್ರೋಲ್ ರೂಮ್ಗಳನ್ನ ಸ್ಥಾಪಿಸಿದ್ದು, ಸಹಾಯವಾಣಿ ಸಹ ಬಿಡುಗಡೆ ಮಾಡಲಾಗಿದೆ ಎಂದು ಭಾರತೀಯ ರಾಯಭಾರ ಕಚೇರಿ ಮಾಹಿತಿ ನೀಡಿದೆ.
ಕೆಲ ಗಂಟೆಗಳ ಹಿಂದೆ ವಿಯೆಟ್ನಾಂನ ಫು ಕ್ವಾಕ್ ದ್ವೀಪದ ಬಳಿ ಹಲವಾರು ಭಾರತೀಯ ಪ್ರವಾಸಿಗರನ್ನ ಹೊತ್ತೊಯ್ಯುತ್ತಿದ್ದ ದೋಣಿ ಮುಳುಗಡೆಯಾಗಿದೆ. ಸ್ಥಳೀಯ ಅಧಿಕಾರಿಗಳಿಂದ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ನಿಖರ ಮಾಹಿತಿ ಖಚಿತಪಡಿಸಿಕೊಳ್ಳಲಾಗುತ್ತಿದೆ ಎಂದು ರಾಯಭಾರ ಕಚೇರಿ ಎಕ್ಸ್ ಪೋಸ್ಟ್ನಲ್ಲಿ ತಿಳಿಸಿದೆ.
ಈ ಬೆನ್ನಲ್ಲೇ ಹೊ ಚಿ ಮಿನ್ಹ್ ನಗರದಲ್ಲಿರುವ ಭಾರತದ ಕಾನ್ಸುಲೇಟ್ ಜನರಲ್ನಲ್ಲಿ ಕಂಟ್ರೋಲ್ ರೂಮ್ ಸ್ಥಾಪಿಸಿ, ಸಹಾಯವಾಣಿಯನ್ನೂ ಬಿಡುಗಡೆ ಮಾಡಲಾಗಿದೆ. ಸಂತ್ರಸ್ತ ಕುಟುಂಬಗಳು ಸಹಾಯಕ್ಕಾಗಿ ಸಂಪರ್ಕಿಸುವಂತೆ ಮನವಿ ಮಾಡಲಾಗಿದೆ.