ಇಸ್ಲಾಮಾಬಾದ್, ಜು. 14 (DaijiworldNews/AA): ಪಾಕ್ ಆಕ್ರಮಿತ ಕಾಶ್ಮೀರ(ಪಿಒಕೆ)ದಲ್ಲಿ ಘರ್ಷಣೆ ವೇಳೆ ಪಾಕಿಸ್ತಾನ ಪಡೆಗಳು ನಡೆಸಿದ ಗುಂಡಿನ ದಾಳಿಯಿಂದ 6 ನಾಗರಿಕರು ಮೃತಪಟ್ಟಿದ್ದಾರೆ.

ಪಾಕಿಸ್ತಾನಿ ಭದ್ರತಾ ಪಡೆಗಳು ರಾವಲಕೋಟ್ನಲ್ಲಿ ನಾಗರಿಕರ ಮೇಲೆ ಕಾರ್ಯಾಚರಣೆ ನಡೆಸಿದ ನಂತರ, ಪಿಒಕೆಯಲ್ಲಿ ಮತ್ತೊಂದು ಹಿಂಸಾತ್ಮಕ ಭುಗಿಲೆದ್ದಿತು. ಇದು ನಗರದ ಹೊಸ ಬಸ್ ಟರ್ಮಿನಲ್ ಬಳಿ ಘರ್ಷಣೆಗೆ ಕಾರಣವಾಯಿತು. ಘರ್ಷಣೆಯ ವೇಳೆ ಪಾಕ್ ಪಡೆಗಳು ಗುಂಡು ಹಾರಿಸಿದ ಪರಿಣಾಮ ಆರು ನಾಗರಿಕರು ಸಾವನ್ನಪ್ಪಿದ್ದಾರೆ.
ಇತ್ತೀಚಿನ ಹಿಂಸಾಚಾರವು ಈ ಪ್ರದೇಶದಲ್ಲಿ ಮತ್ತಷ್ಟು ಉದ್ವಿಗ್ನತೆಗೆ ಕಾರಣವಾಗಿದೆ. ಸ್ಥಳೀಯ ನಾಗರಿಕರು ಪಾಕ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.