ಕಠ್ಮಂಡು, ಆ. 29 (DaijiworldNews/AA): ನೇಪಾಳ-ಚೀನಾ ಗಡಿಯ ಸಮೀಪದ ಹಿಮನದಿ ಕುಸಿದು ಸಂಭವಿಸಿದ ಭೀಕರ ಪ್ರವಾಹದಲ್ಲಿ ಸಾವನ್ನಪ್ಪಿದವರ ಸಂಖ್ಯೆ 626ಕ್ಕೆ ಏರಿಕೆಯಾಗಿದೆ. ಈಗಾಗಲೇ 4,400ಕ್ಕೂ ಅಧಿಕ ಜನರನ್ನು ರಕ್ಷಿಸಲಾಗಿದ್ದು, 2,400ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ.

ಹಿಮನದಿ ಕುಸಿದು ಲ್ಹೆಂಡೆ ಖೋಲಾ ನದಿಗೆ ಭಾರಿ ಪ್ರಮಾಣದ ಮಂಜುಗಡ್ಡೆ, ಬಂಡೆಗಳು ಹರಿದು ಬಂದು ಭೋಟೆ ಕೋಶಿ ನದಿಗೆ ನೀರು ನುಗ್ಗಿದೆ. ಪರಿಣಾಮ ರಸುವಾ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರೀ ಹಾನಿಯುಂಟಾಗಿದೆ. ಇದುವರೆಗೆ 626 ಮಂದಿ ಸಾವನ್ನಪ್ಪಿದ್ದಾರೆ ಎಂದು ನೇಪಾಳ ಪೊಲೀಸರು ಮಾಹಿತಿ ನೀಡಿದ್ದಾರೆ.
ಇನ್ನೂ ಇದೇ ಪ್ರವಾಹದಿಂದಾಗಿ ಚೀನಾದಲ್ಲಿ 7 ಮಂದಿ ಸಾವನ್ನಪ್ಪಿದ್ದಾರೆ. ಇದಲ್ಲದೇ ಟಿಬೆಟ್ ಹಾಗೂ ನೇಪಾಳದಲ್ಲಿ ಸುಮಾರು 2,500ಕ್ಕೂ ಅಧಿಕ ಜನರು ನಾಪತ್ತೆಯಾಗಿದ್ದಾರೆ. ರಕ್ಷಣಾ ಕಾರ್ಯಾಚರಣೆ ತೀವ್ರಗೊಂಡಿರುವ ಹಿನ್ನೆಲೆ, ನೇಪಾಳ ಸರ್ಕಾರದ ಮನವಿಯ ಮೇರೆಗೆ ವೈದ್ಯಕೀಯ ಸಿಬ್ಬಂದಿ ಮತ್ತು ಸುರಂಗ ರಕ್ಷಣಾ ತಜ್ಞರನ್ನು ಒಳಗೊಂಡ 11 ಸದಸ್ಯರ ಭಾರತೀಯ ತಂಡವು ಶನಿವಾರ ನೇಪಾಳಕ್ಕೆ ತಲುಪಿದೆ.