ಬಂಟ್ವಾಳ, ಜೂ 4 Daijiworld News/MSP): ಬಿ ಮೂಡ ಗ್ರಾಮದ ತಲಪಾಡಿ ಬಳಿಯ ದುರ್ಗಾ ಗ್ಯಾರೇಜ್ ಬಳಿಯಲ್ಲಿ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ಬಂಟ್ವಾಳ ನಗರ ಠಾಣಾ ಪೊಲೀಸರು ಮೇ 03 ರ ಸೋಮವಾರ ಬಂಧಿಸಿದ್ದಾರೆ.

ಬಂಧಿತನನ್ನು ಬಂಟ್ವಾಳ ತಾಲೂಕಿ ಮಂಚಿ ಗ್ರಾಮದ ಕುಕ್ಕಾಜೆ ಮನೆಯ ಸಂಶುದ್ಧಿನ್ ( 25 ) ಎಂದು ಗುರುತಿಸಲಾಗಿದೆ. ಗಾಂಜಾ ಮಾರಾಟ ಮಾಡುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು, ದಾಳಿ ನಡೆಸಿ ಈತನಿಂದ 40,000 ಮೌಲ್ಯದ 1.896 ಕೆ.ಜಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಈತ ಉಳ್ಳಾಲದ ಮಿಸ್ಬಾ ಎಂಬಾತನಿಂದ ಉಪ್ಪಿನಂಗಡಿಯ ಒರ್ವ ವ್ಯಕ್ತಿಯ ಮುಖಾಂತರ ಗಾಂಜಾವನ್ನು ಮಾರಾಟ ಮಾಡುತ್ತಿರುವುದಾಗಿ ಪೊಲೀಸ್ ವಿಚಾರಣೆ ವೇಳೆ ತಿಳಿಸಿದ್ದಾನೆ. ಕೃತ್ಯಕ್ಕೆ ಬಳಸಿದ್ದ 5000 ಮೌಲ್ಯದ ಮೊಬೈಲ್ ಹಾಗೂ 110 ರೂಪಾಯಿ ನಗದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಬಂಟ್ವಾಳ ನಗರ ಠಾಣಾ ಪೊಲೀಸ್ ಉಪನಿರೀಕ್ಷಕ ಚಂದ್ರಶೇಖರ್ ಹೆಚ್.ವಿ ಮತ್ತು ಸಿಬ್ಬಂದಿಗಳು ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.