ಮಂಗಳೂರು, ಏ.15(DaijiworldNews/TA): ಮೂಲ್ಕಿಯ ಕೊಲ್ನಾಡು ಮೂಲದ ರಿಕ್ಷಾ ಚಾಲಕ ಮುಹಮ್ಮದ್ ಶರೀಫ್ ಹತ್ಯೆ ಪ್ರಕರಣ ಖಂಡನಾರ್ಹವಾಗಿದೆ. ಪ್ರಕರಣ ಬೇಧಿಸಿದ ಕೇರಳ ಹಾಗೂ ಕರ್ನಾಟಕ ಪೊಲೀಸರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ತಿಳಿಸಿದ್ದಾರೆ.

ಮಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಥಿಯಲ್ಲಿ ಮಾತನಾಡಿದ ಅವರು, ರಿಕ್ಷಾ ಚಾಲಕರ ಮೇಲೆ ನಡೆಯುವಂಥ ಕೃತ್ಯಗಳು ಗಂಭೀರವಾಗಿದೆ. ಕ್ಷುಲ್ಲಕ ಕಾರಣಕ್ಕಾಗಿ ರಿಕ್ಷಾ ಚಾಲಕನ ಹತ್ಯೆ ನಡೆದಿದೆ. ಈಗಾಗಲೇ ಮಂಗಳೂರು ನಗರದಲ್ಲಿ ರಿಕ್ಷಾ ಚಾಲಕರ ಮೇಲೆ ರಾತ್ರಿ ವೇಳೆಯಲ್ಲಿ ಅಪರಾಧ ಕೃತ್ಯಗಳು ನಡೆಯದಂತೆ ಪೊಲೀಸರು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು. ಮೃತ ರಿಕ್ಷಾ ಚಾಲಕರ ಕುಟುಂಬಕ್ಕೆ ರಾಜ್ಯ ಹಾಗೂ ಕೇಂದ್ರ ಸರ್ಕಾರ ನೆರವು ನೀಡಬೇಕು ಎಂದು ಅವರು ತಿಳಿಸಿದರು.
ಇನ್ನು ಮುಹಮ್ಮದ್ ಶರೀಫ್ ಅವರ ಮೃತದೇಹ ಕರ್ನಾಟಕ ಕೇರಳ ಗಡಿಭಾಗ ಮಂಜೇಶ್ವರ ಕುಂಜತ್ತೂರು ಪದವಿನ ಬಾವಿಯಲ್ಲಿ ಪತ್ತೆಯಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ವಶಕ್ಕೆ ಪಡೆಯಲಾಗಿದೆ.