ಪುತ್ತೂರು, ಏ.29 (DaijiworldNews/AA): ಕಾಡಾನೆ ದಾಳಿಗೆ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಪೆರ್ಲಂಪಾಡಿ ಬಳಿ ಮಂಗಳವಾರ ಬೆಳಿಗ್ಗೆ ನಡೆದಿದೆ.

ಪೆರ್ಲಂಪಾಡಿಯ ಕಣಿಯಾರು ಬಳಿ ಟ್ಯಾಪಿಂಗ್ ನಡೆಸುತ್ತಿದ್ದಾಗ ಆನೆ ದಾಳಿ ನಡೆಸಿದೆ. ಟ್ಯಾಪಿಂಗ್ ನಡೆಸುತ್ತಿದ್ದ ಮಹಿಳೆ, ದಾರುಣವಾಗಿ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಆನೆ ಒಂಟಿಯಾಗಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ.