ಕಡಬ, ಮೇ. 12 (DaijiworldNews/AA): ನೆಲ್ಯಾಡಿ ಗ್ರಾಮದ ಮಾದೇರಿ ಎಂಬಲ್ಲಿ ಶರತ್ ಕುಮಾರ್ನನ್ನು ಶುಕ್ರವಾರ ರಾತ್ರಿ ಮರದ ದೊಣ್ಣೆಯಿಂದ ಹೊಡೆದು ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಆರೋಪಿ ಹರಿಪ್ರಸಾದ್ನನ್ನು ಉಪ್ಪಿನಂಗಡಿ ಪೊಲೀಸರು ಮೇ 11ರಂದು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ತನ್ನ ಚಿಕ್ಕಪ್ಪನ ಮನೆಯವರೊಡಗೂಡಿ ಸಂಗ್ರಹಿಸಿದ್ದ ಕಟ್ಟಿಗೆಯನ್ನು ತುಂಡರಿಸಿದ ವಿಚಾರಕ್ಕೆ ಸಂಬಂಧಿಸಿ ಚಿಕ್ಕಪ್ಪನ ಮನೆ ಮಂದಿಯೊಂದಿಗೆ ಗಲಾಟೆ ಮಾಡಿದ ಆತನ ತಲೆಗೆ ಹರಿಪ್ರಸಾದ್ ಮರದ ದೊಣ್ಣೆಯಿಂದ ಹಲ್ಲೆ ನಡೆಸಿ ಕೊಲ್ಲಲಾಗಿತ್ತು.
ಈ ಬಗ್ಗೆ ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿ ಹರಿಪ್ರಸಾದ್ ನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ತಿಳಿದುಬಂದಿದೆ.