ಉಡುಪಿ,ಮೇ. 23 (DaijiworldNews/AK): ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯಾ ರೆಡ್ಡಿ ಅವರು ಜ್ಯೋತಿ ಹೆಬ್ಬಾರ್ ಅವರನ್ನು ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ನ ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

ಜ್ಯೋತಿ ಹೆಬ್ಬಾರ್ ಅವರು ಉಡುಪಿ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷೆ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ಮಹಿಳಾ ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷೆ ಮತ್ತು ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯೆ ಸೇರಿದಂತೆ ಪಕ್ಷದ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ ಮತ್ತು ಪ್ರಸ್ತುತ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ನೇಮಕಗೊಂಡಿದ್ದಾರೆ.