ಪುತ್ತೂರು,ಜು. 08 (DaijiworldNews/AK): ತನ್ನ ತಾಯಿ ಜೊತೆಗೆ ಬಸ್ಸಿಗೆಂದು ಕಾಯುತ್ತಿದ್ದ ಅಪ್ರಾಪ್ತ ಬಾಲಕಿಗೆ ವ್ಯಕ್ತಿಯೊಬ್ಬ ಲೈಂಗಿಕ ಕಿರುಕುಳ ನೀಡಿದ ಪ್ರಕರಣ ಪುತ್ತೂರಿನ ನೆಹರೂನಗರ ಬಸ್ಸು ನಿಲ್ದಾಣದಲ್ಲಿ ಮಂಗಳವಾರ ನಡೆದಿದ್ದು, ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಈ ಬಗ್ಗೆ ಮುಂದಿನ ಕಾನೂನುಕ್ರಮ ಕೈಗೊಳ್ಳಲಾಗುವುದು. ಎಂದು ಪೊಲೀಸರು ತಿಳಿಸಿದ್ದಾರೆ.
ಬಾಲಕಿ ತನ್ನ ತಾಯಿಯೊಂದಿಗೆ ನಿಂತಿರುವ ಸಂದರ್ಭ ಅಪಚರಿತ ವ್ಯಕ್ತಿ ಅನುಚಿತವಾಗಿ ವರ್ತಿಸಿ, ಲೈಂಗಿಕ ಕಿರುಕುಳ ನೀಡಿ ಹಲ್ಲೆಅಸಭ್ಯ ರೀತಿಯಲ್ಲಿ ವರ್ತಿಸಿದ್ದು, ತಕ್ಷಣವೇ ಬಾಲಕಿಯ ತಾಯಿ ಈ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಪೊಲೀಸ್ ಠಾಣೆಯಲ್ಲಿ ಠಾಣೆಯಲ್ಲಿ ದೂರು ನೀಡಿದ್ದರು.
ದೂರಿನ ಆಧಾರದಲ್ಲಿ ಪೋಕೋ ಕಾಯ್ದೆ 2012ರ ಕಲಂ 8 ಹಾಗೂ ಭಾರತೀಯ ದಂಡ ಸಂಹಿತೆ (BNS 2023) 126(2), 74, 115(2), 353(2) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.