ವಿಟ್ಲ, ಜು. 09 (DaijiworldNews/TA): ಇಲ್ಲಿಯ ಖಾಸಗಿ ಬಸ್ ನಿಲ್ದಾಣದ ಸಮೀಪ ಬಾಲಕನೋರ್ವ ತನ್ನ ಶಾಲಾ ಸಹಪಾಠಿಯೊಂದಿಗೆ ಮಾತನಾಡುತ್ತಿದ್ದ ವೇಳೆ ಅಲ್ಲಿಗೆ ಬಂದ ವ್ಯಕ್ತಿ ಬಾಲಕನಿಗೆ ಜೀವ ಬೆದರಿಕೆ ಒಡ್ಡಿರುವ ಬಗ್ಗೆ ಪ್ರಕರಣ ದಾಖಲಾಗಿದೆ.

ಮಂಜೇಶ್ವರ ಎನ್ಮಕಜೆ ನಿವಾಸಿ ಪದ್ಮರಾಜ್ ಎಂಬಾತನನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಬಾಲಕ ತನ್ನ ಶಾಲಾ ಸಹಪಾಠಿಯೊಂದಿಗೆ ವಿಟ್ಲದ ಖಾಸಗಿ ಬಸ್ ನಿಲ್ದಾಣದಲ್ಲಿ ಮಾತನಾಡುತ್ತಿದ್ದು, ಈ ಸಂದರ್ಭ ಪದ್ಮರಾಜ್ ಅಲ್ಲಿಗೆ ಬಂದು ಬಾಲಕನಿಗೆ ಜೀವ ಬೆದರಿಕೆ ಒಡ್ಡಿದ್ದಾನೆ ಎಂದು ತಿಳಿದುಬಂದಿದೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.