ಮಂಗಳೂರು, ಜು. 10 (DaijiworldNews/AA): ಒಂದೇ ಸ್ಕೂಟಿಯಲ್ಲಿ ಪ್ರಯಾಣಿಸಿ ಸಂಚಾರ ನಿಯಮ ಉಲ್ಲಂಘಿಸಿದ ನಾಲ್ವರು ಯುವಕರಿಗೆ ಮಂಗಳೂರು ನಗರದಲ್ಲಿ ಪೊಲೀಸರು 8 ರಂದು ದಂಡ ವಿಧಿಸಲಾಗಿದೆ.

ಸಂಚಾರ ಪೂರ್ವ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಜುಲೈ 8 ರಂದು ನಾಲ್ವರು ಯುವಕರು ಪ್ರಯಾಣಿಸತ್ತಿದ್ದ ಸ್ಕೂಟಿಯನ್ನು ತಡೆದಿದ್ದಾರೆ. ಈ ವೇಳೆ ನಾಲ್ವರು ಯುವಕರನ್ನು ವಿಚಾರಿಸಿ, ಇಂತಹ ಸಂಚಾರ ನಿಯಮ ಉಲ್ಲಂಘನೆಗಳು ಅಪಾಯಕಾರಿ ಎಂದು ತಿಳಿಸಿರುವ ಅವರು, ಸಂಚಾರಿ ನಿಯಮ ಉಲ್ಲಂಘನೆಯ ಪರಿಣಾಮಗಳ ಬಗ್ಗೆ ಅರಿವು ಮೂಡಿಸಿದರು. ಸಂಚಾರ ನಿಯಮ ಉಲ್ಲಂಘಿಸಿದ್ದಕ್ಕಾಗಿ ಯವಕರಿಗೆ 2,500 ರೂ. ದಂಡ ವಿಧಿಸಿದರು.
ಸಾರ್ವಜನಿಕರು ರಸ್ತೆ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಸಂಚಾರ ನಿಯಮಗಳನ್ನು ಪಾಲಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.