ಸುಳ್ಯ, ಜು. 22 (DaijiworldNews/AA): ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಸುಳ್ಯ ತಾಲೂಕಿನ ಐವರ್ನಾಡು ಗ್ರಾಮದ ಚಂದ್ರಲಿಂಗಂ(66) ಅವರು ಜು.21ರಂದು ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ತೀವ್ರ ಸಕ್ಕರೆ ಕಾಯಿಲೆಗೆ ಅವರು ಒಳಗಾಗಿದ್ದರು. ಆದರೂ ಕಾರ್ಮಿಕ ಸಂಘಟನೆಯಲ್ಲಿ ಸಕ್ರಿಯರಾಗಿದ್ದ ಜು.20ರಂದು ಐವರ್ನಾಡಿನಲ್ಲಿ ತೋಟ ತೊಳಿಲಾಲರ ಸಂಘದ ಸಭೆಯಲ್ಲಿ ಭಾಗವಹಿಸಿದ್ದ ಅವರು ವೇದಿಕೆಯಲ್ಲಿರುವಾಗಲೇ ಲೋ ಬಿ.ಪಿ.ಗೊಳಗಾಗಿ ಅಸ್ವಸ್ಥಗೊಂಡರು.
ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ದು ಅಲ್ಲಿಂದ ಮಡಿಕೇರಿ ಆಸ್ಪತ್ರೆಗೆ ಕರೆದೊಯ್ದು ಬಳಿಕ ಮೈಸೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಲಾಗಿತ್ತು. ಅಲ್ಲಿ ತೀವ್ರ ನಿಗಾ ಘಟಕದಲ್ಲಿ ದಾಖಲಿಸಿ ಚಿಕಿತ್ಸೆ ಆರಂಭಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಸಂಜೆ ಕೊನೆಯುಸಿರೆಳೆದಿದ್ದಾರೆ.