ಬಂಟ್ವಾಳ, ಜು. 27 (DaijiworldNews/AA): ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾಗಿ ಇಬ್ಬರಿಗೆ ಗಾಯವಾದ ಘಟನೆ ಮಾಣಿ ಸಮೀಪದ ಬೊಳ್ಳುಕಲ್ಲು ಬಳಿ ಜುಲೈ 26 ರಂದು ನಡೆದಿದೆ.

ಉಪ್ಪಿನಂಗಡಿಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಅಪಘಾತದ ಪರಿಣಾಮ ಕಾರಿನಲ್ಲಿದ್ದ ಚಾಲಕ ಮತ್ತು ಓರ್ವ ಪ್ರಯಾಣಿಕ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.
ಹೆದ್ದಾರಿ ಕಾಮಗಾರಿ ಅವಾಂತರದಿಂದಾಗಿ ಹೆದ್ದಾರಿಯಲ್ಲಿ ಮಳೆ ನೀರು ತುಂಬಿದೆ. ಹೀಗಾಗಿ ಆಗಾಗ್ಗೆ ಅಪಘಾತಗಳು ಸಂಭವಿಸುತ್ತಿವೆ ಎಂದು ವಾಹನ ಚಾಲಕ, ಮಾಲಕರು ತಿಳಿಸಿದ್ದಾರೆ.