ಬಂಟ್ವಾಳ, ಜು. 27 (DaijiworldNews/AA): ಪಶ್ಚಿಮ ಘಟ್ಟದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ನೇತ್ರಾವತಿ ನದಿಯ ನೀರಿನ ಮಟ್ಟ ಗಣನೀಯವಾಗಿ ಏರಿಕೆಯಾಗಿದೆ. ಇದರಿಂದಾಗಿ ನೇತ್ರಾವರಿ ನದಿ ಪಾತ್ರದ ಸರಪಾಡಿ ಮತ್ತು ಮಣಿನಾಲ್ಕೂರು ಗ್ರಾಮಗಳ ಹಲವು ಅಡಿಕೆ ತೋಟಗಳು ಜಲಾವೃತಗೊಂಡಿವೆ. ಈ ಪ್ರದೇಶಗಳ ತಗ್ಗು ಪ್ರದೇಶಗಳೂ ಸಹ ಮುಳುಗಿವೆ.

ಜುಲೈ 26 ರಿಂದ ನದಿಯಲ್ಲಿ ನೀರು ಹೆಚ್ಚಿನ ಪ್ರಮಾಣದಲ್ಲಿ ಹರಿದುಬರುತ್ತಿದೆ. ಇಂದು ಭಾನುವಾರ, ಜುಲೈ 27 ರ ಬೆಳಿಗ್ಗೆ ಬಂಟ್ವಾಳದಲ್ಲಿ ನೀರಿನ ಮಟ್ಟ 7.4 ಮೀಟರ್ ದಾಖಲಾಗಿದೆ. ಈ ಪ್ರದೇಶದಲ್ಲಿ ಅಪಾಯದ ಮಟ್ಟ 8 ಮೀಟರ್ ಎಂದು ನಿಗದಿದ್ದು, ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ.
ಮಳೆಯ ಜೊತೆ ಬೀಸುತ್ತಿರುವ ಗಾಳಿಯಿಂದಾಗಿ ಹಲವು ಮನೆಗಳ ಮೇಲೆ ಮರಗಳು ಬಿದ್ದಿದ್ದು, ವಿವಿಧೆಡೆ ಆಸ್ತಿಪಾಸ್ತಿಗಳಿಗೆ ಹಾನಿಯಾಗಿದೆ.