ಸುಳ್ಯ, ಜು. 27 (DaijiworldNews/AA): ಕೆಎಸ್ಆರ್ಟಿಸಿ ಬಸ್ನ ಎದುರು ಅಡ್ಡಾದಿಡ್ಡಿಯಾಗಿ ಬೈಕ್ ಓಡಿಸಿ ಸಂಚಾರಕ್ಕೆ ಅಡ್ಡಿ ಪಡಿಸಿದ ಆರೋಪದ ಮೇರೆಗೆ ಇಬ್ಬರು ಯುವಕರ ವಿರುದ್ಧ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶುಕ್ರವಾರ ಬಳ್ಪದಿಂದ ಸುಬ್ರಹ್ಮಣ್ಯಕ್ಕೆ ಬಸ್ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ.
ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಯುವಕರು ಬಸ್ ಸಂಚಾರಕ್ಕೆ ಅಡ್ಡಿಪಡಿಸಿದ ಹಾಗೂ ಸಂಚಾರ ನಿಯಮ ಉಲ್ಲಂಘಸಿದ ಹಿನ್ನೆಲೆ ಸಾರ್ವಜನಿಕರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.
ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ, ಸುಬ್ರಹ್ಮಣ್ಯ ಪೊಲೀಸರು ಇಬ್ಬರು ಯುವಕರನ್ನು ಪತ್ತೆಹಚ್ಚಿ ಠಾಣೆಗೆ ಕರೆಸಿ ದಂಡ ವಿಧಿಸಿದ್ದಾರೆ ಎಂದು ತಿಳಿದುಬಂದಿದೆ. ಇಬ್ಬರು ಯುವಕರನ್ನು ಗುತ್ತಿಗಾರು ಹಾಗೂ ಏನೆಕಲ್ ನಿವಾಸಿಗಳೆಂದು ಗುರುತಿಸಲಾಗಿದೆ.