ಬಂಟ್ವಾಳ, ಜು. 30 (DaijiworldNews/AA): ಖಾಸಗಿ ಬಸ್ ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ವಿಟ್ಲ ಸಮೀಪದ ಚಂದಳಿಕೆಯಲ್ಲಿ ಸಂಭವಿಸಿದೆ.

ವಿಟ್ಲದಿಂದ ಬೆಂಗಳೂರಿಗೆ ಹೊರಟಿದ್ದ ಖಾಸಗಿ ಬಸ್ ಅತಿವೇಗವಾಗಿ ಓವರ್ಟೇಕ್ ಮಾಡುವಾಗ ಪುತ್ತೂರು ಕಡೆಯಿಂದ ಬರುತ್ತಿದ್ದ ಬೈಕ್ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಗೊಂಡ ಬೈಕ್ ಸವಾರನನ್ನು ಪೆರುವಾಯಿ ನಿವಾಸಿ ಅರ್ಚಕ ಹರ್ಷ ಭಟ್ ಎಂದು ಗುರುತಿಸಲಾಗಿದೆ. ಗಾಯಾಳುವನ್ನು ತಕ್ಷಣವೇ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.