ಬೆಳ್ತಂಗಡಿ, ಆ. 01 (DaijiworldNews/AA): ಅನಾಮಿಕ ಗುರುತಿಸಿದ ಏಳನೆಯ ಸ್ಥಳದಲ್ಲಿ ವಿಶೇಷ ತನಿಖಾ ದಳ (ಎಸ್ಐಟಿ) ನಡೆಸಿದ ತೀವ್ರ ಶೋಧ ಕಾರ್ಯಾಚರಣೆಯ ನಂತರವೂ ಯಾವುದೇ ಕಳೇಬರ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ.


ನದಿಬದಿಯಲ್ಲಿಯೇ ಇದ್ದ ಏಳನೇ ಸ್ಥಳದಲ್ಲಿ ಇಂದು ಬೆಳಗ್ಗೆ ಎಸ್.ಐ.ಟಿ ತಂಡ ಕಾರ್ಯಾಚರಣೆ ಆರಂಭಿಸಿತ್ತು. ಆದರೆ ಅಗೆಯುವ ಸಂದರ್ಭದಲ್ಲಿ ಯಾವುದೇ ವಸ್ತುಗಳು ಪತ್ತೆಯಾಗಿಲ್ಲ ಎನ್ನಲಾಗಿದೆ.
ಇನ್ನು ಅನಾಮಿಕ ಗುರುತಿಸಿದ ಎಂಟನೇ ಸ್ಥಳದ ಅಗೆತಕ್ಕೆ ಸಿದ್ಧತೆ ನಡೆಯುತ್ತಿದೆ.