ಮಂಗಳೂರು, ಜೂ 26 (Daijiworld News/MSP): ನಗರದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗಿದ್ದು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಡೆಂಗ್ಯೂ ಜ್ವರ ಹರಡದಂತೆ ಸೂಕ್ತ ಕ್ರಮಕೈಗೊಳ್ಳಲು ವಿಫಲರಾಗಿರುವ ಹಿನ್ನೆಲೆಯಲ್ಲಿ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಪ್ರವೀಣ್ ಕುಮಾರ್ ಅವರನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ರಾಮಕೃಷ್ಣ ರಾವ್ ಕರ್ತವ್ಯದಿಂದ ಅಮಾನತುಗೊಳಿಸಿದ್ದಾರೆ.

ಜೂ. 24 ರ ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ತುರ್ತು ಸಭೆಯಲ್ಲಿ ಭಾಗವಹಿಸಿದ್ದ ಡಾ. ಪ್ರವೀಣ್ ಕುಮಾರ್ ಅವರು ಡೆಂಗ್ಯೂ ಪ್ರಕರಣಗಳ ಕುರಿತು ಸಭೆಗೆ ನೀಡಿದ ಮಾಹಿತಿ ಸಮರ್ಪಕವಾಗಿರಲಿಲ್ಲ.
ಕರ್ತವ್ಯ ಸಮರ್ಪಕವಾಗಿ ನಿರ್ವಹಿಸದ ಕಾರಣಕ್ಕಾಗಿ ಅಮಾನತುಗೊಳಿಸುವಂತೆ ಡಿಎಚ್ ಓ ಗೆ ಜಿಲ್ಲಾಧಿಕಾರಿ ಸೂಚಿಸಿದರು ಸೋಮವಾರ ಅವರನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಲಾಗಿದೆ. ಮಂಗಳೂರು ತಾಲ್ಲೂಕು ಆರೋಗ್ಯ ಅಧಿಕಾರಿ ನವೀನ್ ಚಂದ್ರ ಗುಲಾಬಿ ಅವರಿಗೆ ಸರ್ವೇಕ್ಷಣ ಅಧಿಕಾರಿ ಹೆಚ್ಚುವರಿ ಜವಾಬ್ದಾರಿ ವಹಿಸಲಾಗಿದೆ.