ಉಡುಪಿ, ಆ. 15 (DaijiworldNews/AA): ರಾಜ್ಯದ ಆರ್ಥಿಕತೆಗೆ ಮೀನುಗಾರಿಕೆ ತನ್ನದೇ ಆದ ಕೊಡುಗೆ ನೀಡುತ್ತಿದೆ. ರಾಜ್ಯ ಸರ್ಕಾರವೂ ಕೂಡಾ ಮೀನುಗಾರರಿಗೆ ಅನೇಕ ಸೌಲಭ್ಯಗಳನ್ನು ನೀಡುತ್ತಿದ್ದು ಮೀನುಗಾರರ ಹಿತಾಸಕ್ತಿ ಕಾಪಾಡುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.






ಉಡುಪಿ ಜಿಲ್ಲಾಡಳಿತ ಮತ್ತು ಮೀನುಗಾರಿಕಾ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಬುಧವಾರ ಜಿಲ್ಲಾಧಿಕಾರಿ ಕಚೇರಿ ತಾಲೂಕಿನ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಮೀನುಗಾರಿಕೆಯಲ್ಲಿ ಜೀವರಕ್ಷಕ ಸಾಧನಗಳ ಪ್ರಾಮುಖ್ಯತೆಯ ಅರಿವು ಮೂಡಿಸುವ ಕಾರ್ಯಾಗಾರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಈ ಸಂದರ್ಭದಲ್ಲಿ ಜೀವರಕ್ಷಕ ಸಾಧನೆ, ಮನೆ ನಿವೇಶನ ಪತ್ರವನ್ನು ಹಸ್ತಾಂತರಿಸಲಾಯಿತು. ಜಿಲ್ಲಾಧಿಕಾರಿ ಸ್ವರೂಪ ಟಿ ಕೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರತಿಕ್ ಬಾಯಲ್ ಮೀನುಗಾರಿಕೆ ಜೀವರಕ್ಷಕ ಸಾಧನೆಗಳ ಪ್ರಾಮುಖ್ಯತೆಯ ಪ್ರಾಸ್ತಾವಿಕ ಮಾತುಗಳನ್ನಾಡಿದರು.
ಮೀನುಗಾರ ಸಂಕಷ್ಟ ನಿಧಿ ಸಮಿತಿಯ ಸದಸ್ಯ ಮದನ್ ಕುಮಾರ್ ಅತಿಥಿ ಗಣ್ಯರನ್ನು ಸ್ವಾಗತಿಸಿದರು. ಜಿಲ್ಲಾ ಎಸ್ಪಿ ಹರಿರಾಮ್ ಶಂಕರ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್, ತಾಲೂಕು ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್, ಮೀನುಗಾರಿಕಾ ಇಲಾಖೆಯ ಮೀನುಗಾರ ಸಂಕಷ್ಟ ನಿಧಿ ಸಮಿತಿಯ ಸದಸ್ಯ ಮದನ್ ಕುಮಾರ್ ಉಪಸ್ಥಿತರಿದ್ದರು.