ಮಂಗಳೂರು, ಆ. 15 (DaijiworldNews/TA): ಬೋಂದೆಲ್ ನಲ್ಲಿರುವ ದಾಯ್ಜಿವರ್ಲ್ಡ್ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಕಚೇರಿಯಲ್ಲಿ 79ನೇ ವರ್ಷದ ಸ್ವಾತಂತ್ರ್ಯೋತ್ಸವವನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು.



ದಾಯ್ಜಿವರ್ಲ್ಡ್ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥಾಪಕ ವಾಲ್ಟರ್ ನಂದಳಿಕೆ ಅವರು ಧ್ವಜಾರೋಹಣ ನೆರವೇರಿಸಿ, ಶುಭ ಹಾರೈಸಿದರು. ಈ ವೇಳೆ ಸಂಸ್ಥೆಯ ಆಪರೇಶನ್ಸ್ ಡೈರೆಕ್ಟರ್ ಮೆಲ್ವಿನ್ ರೋಡ್ರಿಗಸ್, HR ಡೈರೆಕ್ಟರ್ ರೊನಾಲ್ಡ್ ನಜ್ರೆತ್ ಉಪಸ್ಥಿತರಿದ್ದರು. ಸಂಸ್ಥೆಯ ಪ್ರೊಡಕ್ಷನ್ ಮ್ಯಾನೇಜರ್ ಪ್ರಶಾಂತ್ ಸಿ.ಕೆ ಅವರು ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಸಿಬ್ಬಂದಿ ಭಾಗಿಯಾಗಿದ್ದರು.