ಬಂಟ್ವಾಳ, ಆ. 15 (DaijiworldNews/AA): ಮಾಣಿ ಮೈಸೂರು ರಾಜ್ಯ ಹೆದ್ದಾರಿಯ ನೇರಳಕಟ್ಟೆ ಸಮೀಪದ ಪರ್ಲೊಟ್ಟು ಎಂಬಲ್ಲಿ ರಸ್ತೆಯ ಮೇಲೆ ತುಂಬಾ ಹಳೆಯದಾದ ಬೃಹತ್ ಗಾತ್ರದ ಮರವೊಂದು ಮುರಿದು ಬಿದ್ದು ಸಂಚಾರಕ್ಕೆ ಅಡಚಣೆ ಉಂಟಾಯಿತು.

ಅದೃಷ್ಟವಶಾತ್ ಈ ಸಂದರ್ಭದಲ್ಲಿ ಯಾವುದೇ ವಾಹನಗಳ ಸಂಚಾರವಿಲ್ಲದ ಕಾರಣ ಭಾರೀ ಅನಾಹುತ ತಪ್ಪಿದಂತಾಗಿದೆ.
ರಜಾ ದಿನವಾಗಿದ್ದರಿಂದ ರಸ್ತೆಯಲ್ಲಿ ವಾಹನಗಳ ಸಂಚಾರ ಕಡಿಮೆಯಿತ್ತು. ಆದರೂ ಮರ ಬೀಳುವ ಸ್ವಲ್ಪವೇ ಮೊದಲು ಲಾರಿ ಸಹಿತ ಘನವಾಹನಗಳು ಆ ಸ್ಥಳದಲ್ಲಿ ಹಾದು ಹೋಗಿದ್ದವು ಎಂದು ಸ್ಥಳೀಯರು ತಿಳಿಸಿದ್ದಾರೆ.
ಕೂಡಲೇ ಸ್ಥಳೀಯ ನಿವಾಸಿಗಳು ರಸ್ತೆಗೆ ಬಿದ್ದ ಮರವನ್ನು ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟರು.