ಮಂಗಳೂರು, ಆ. 16 (DaijiworldNews/AA): ಸಾಮಾಜಿಕ ಜಾಲತಾಣಗಳಲ್ಲಿ ಮೂಡಬಿದಿರೆ ಬಸ್ಸಿನಲ್ಲಿ ವ್ಯಕ್ತಿಯೋರ್ವ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿರುವ ವಿಡಿಯೋ ಹರಿದಾಡುತ್ತಿದ್ದು ಈ ಕುರಿತು ಕ್ರಮ ಕೈಗೊಳ್ಳುವಂತೆ ಮೂಡುಬಿದಿರೆ ಹಿಂದೂ ಮಹಿಳಾ ಸಂರಕ್ಷಣಾ ವೇದಿಕೆಯ ಪದಾಧಿಕಾರಿಗಳು ಮೂಡುಬಿದಿರೆ ಪೊಲೀಸ್ ವೃತ್ತ ನಿರೀಕ್ಷ ಸಂದೇಶ ಪಿ.ಜಿ ಮನವಿ ಸಲ್ಲಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ವಿಡಿಯೋದ ದೃಶ್ಯಾವಳಿಯನ್ನು ಆಧರಿಸಿ ಪ್ರಕರಣದ ಆರೋಪಿಯನ್ನು ಪೊಲೀಸರು ಮೂಡುಬಿದಿರೆ ಪೊಲೀಸ್ ಠಾಣೆಗೆ ಕರೆಯಿಸಿ ವಿಚಾರಣೆ ನಡೆಸಿದ್ದಾರೆ. ಸಂತ್ರಸ್ತ ಮಹಿಳೆ, ವಿಡಿಯೋ ಚಿತ್ರೀಕರಣ ಮಾಡಿದ ವ್ಯಕ್ತಿ ಅಥವಾ ಇತರರು ಯಾವುದೇ ರೀತಿಯಲ್ಲಿ ದೂರು ನೀಡದೇ ಇರುವ ಹಿನ್ನಲ್ಲೆಯಲ್ಲಿ ಆರೋಪಿಗೆ ಎಚ್ಚರಿಕೆ ನೀಡಿ ಬಿಟ್ಟುಕಳುಹಿಸಿದ್ದರು.
ಈ ನಡುವೆ ಮೂಡುಬಿದಿರೆ ಪೊಲೀಸ್ ವೃತ್ತ ನಿರೀಕ್ಷಕ ಸಂದೇಶ್ ಪಿ.ಜಿ ಅವರು ಪ್ರಕಟಣೆ ಹೊರಡಿಸಿ ಆರೋಪಿಯ ವಿರುದ್ಧ ದೂರು ನೀಡುವವರು ಮೂಡುಬಿದಿರೆ ಠಾಣೆಗೆ ಸಂಪರ್ಕಿಸುವಂತೆ ಪ್ರಕಟಣೆ ಹೊರಡಿಸಿದ್ದರು.
ಪ್ರಕರಣದ ಗಂಭೀರತೆ ಅರಿತ ಮೂಡುಬಿದಿರೆ ಹಿಂದೂ ಮಹಿಳಾ ಸಂರಕ್ಷಣ ವೇದಿಕೆ ಪದಾಧಿಕಾರಿಗಳು ಲಿಖಿತ ಮನವಿ ಸಲ್ಲಿಸಿ ಆರೋಪಿಯ ವಿರುದ್ಧ ದೂರು ದಾಖಲಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿದ್ದಾರೆ.
ಮೂಡುಬಿದಿರೆ ಹಿಂದೂ ಮಹಿಳಾ ಸಂರಕ್ಷಣಾ ವೇದಿಕೆಯ ಪದಾಧಿಕಾರಿಗಳಾದ ರಮಿತಾ, ಗೀತಾ, ರಂಜಿತಾ ಮನವಿ ಸಲ್ಲಿಸಿದವರಲ್ಲಿ ಪ್ರಮುಖರಾಗಿದ್ದಾರೆ.