ಮಂಜೇಶ್ವರ, ಆ. 22 (DaijiworldNews/TA): ಪೊಲೀಸ್ ಠಾಣೆಯ ಎಎಸ್ಐ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ. ಕುತ್ತಿಕೋಲ್ ನಿವಾಸಿ ಮಧು (50) ಮೃತಪಟ್ಟವರು.

ಪೊಲೀಸ್ ಕ್ವಾಟರ್ಸ್ ನಲ್ಲಿ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಇಂದು ಬೆಳಿಗ್ಗೆ ಮೃತದೇಹ ಪತ್ತೆಯಾಗಿದೆ. ಬದಿಯಡ್ಕ , ಆದೂರು, ಕಾಸರಗೋಡು ನಗರ ಪೊಲೀಸ್ ಠಾಣೆ ಗಳಲ್ಲಿ ಸೇವೆ ಸಲ್ಲಿಸಿದ್ದರು. ಆತ್ಮಹತ್ಯೆ ಗೆ ಕಾರಣ ತಿಳಿದುಬಂದಿಲ್ಲ. ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಕ್ವಾಟರ್ಸ್ ನಿಂದ ಡೆತ್ ನೋಟ್ ಲಭಿಸಿದೆ. ನಿಷ್ಠಾವಂತ ಅಧಿಕಾರಿಯಾಗಿದ್ದರು.