ಕಾರ್ಕಳ, ಆ. 26 (DaijiworldNews/AA): ಕಳೆದ ಕೆಲ ವರ್ಷಗಳಿಂದ ಕಾರ್ಕಳ ನಗರದ ಬಾಲಾಜಿ ಅರ್ಕೇಡ್ ನಲ್ಲಿ ಹಣಕಾಸು ವ್ಯವಹಾರದಲ್ಲಿ ತೊಡಗಿಸಿಕೊಂಡಿದ್ದ ಮಂಗಳೂರು ಮೂಲದ ನವೀನ್ ಎಂಬವರನ್ನು ಸೋಮವಾರ ತಡರಾತ್ರಿ ದುಷ್ಕರ್ಮಿಗಳು ಕುಂಟಲ್ಪಾಡಿ ಎಂಬಲ್ಲಿ ಬರ್ಬರವಾಗಿ ಕೊಲೆ ಮಾಡಿದ್ದಾರೆ.






ಮಂಗಳವಾರ ನಸುಕಿನ ಜಾವದಲ್ಲಿ ಸ್ಥಳೀಯರಿಗೆ ಈ ಮಾಹಿತಿ ತಿಳಿದಿದ್ದು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳದಲ್ಲಿ ಕಾರ್ಕಳ ನಗರ ಪೊಲೀಸರು ಹಾಗೂ ಹಿರಿಯ ಅಧಿಕಾರಿಗಳು ಆಗಮಿಸಿ ತನಿಖೆ ಕಾರ್ಯ ತೀವ್ರಗೊಳಿಸಿದ್ದಾರೆ.
ಈ ಬಗ್ಗೆ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.