ಮಂಗಳೂರು, ಸೆ. 01 (DaijiworldNews/AK): ದ್ವಿಚಕ್ರ ವಾಹನಕ್ಕೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಹಿಂಬದಿ ಸವಾರ ಗಾಯಗೊಂಡ ಘಟನೆ ಮುಕ್ಕ ಜಂಕ್ಷನ್ನಲ್ಲಿ ಭಾನುವಾರ ರಾತ್ರಿ ಘಟನೆ ನಡೆದಿದೆ.

ಮೃತರನ್ನು ಚೇಳಾಯರು ನಿವಾಸಿ ಕರುಣಾಕರ್ ಶೆಟ್ಟಿ (61) ಎಂದು ಗುರುತಿಸಲಾಗಿದೆ. ಗಾಯಗೊಂಡ ಬಾಲಕನನ್ನು ಉತ್ತರ ಕರ್ನಾಟಕದ ಹನುಮಂತ್ ಅವರ ಪುತ್ರ ವಿಶ್ವನಾಥ್ (16) ಎಂದು ಗುರುತಿಸಲಾಗಿದೆ. ಪ್ರಸ್ತುತ ಚೇಳಾಯರು ನಿವಾಸಿಯಾಗಿದ್ದಾನೆ. ಅವರನ್ನು ಚಿಕಿತ್ಸೆಗಾಗಿ ಮುಕ್ಕದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ವರದಿಗಳ ಪ್ರಕಾರ, ಮುಕ್ಕದಲ್ಲಿ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಕರುಣಾಕರ್ ಶೆಟ್ಟಿ ಭಾನುವಾರ ರಾತ್ರಿ ಅಂಗಡಿ ಮುಚ್ಚಿ ತನ್ನ ದ್ವಿಚಕ್ರ ವಾಹನದಲ್ಲಿ ಮನೆಗೆ ಹಿಂತಿರುಗುತ್ತಿದ್ದರು. ರಾಷ್ಟ್ರೀಯ ಹೆದ್ದಾರಿ 66 ಅನ್ನು ದಾಟುತ್ತಿದ್ದಾಗ, ಹಳೆಯಂಗಡಿಯಿಂದ ಸುರತ್ಕಲ್ ಕಡೆಗೆ ಹೋಗುತ್ತಿದ್ದ ಕಾರು ಅವರ ವಾಹನಕ್ಕೆ ಡಿಕ್ಕಿ ಹೊಡೆದಿದೆ.
ಅಪಘಾತದ ಪರಿಣಾಮ ಕರುಣಾಕರ್ ಶೆಟ್ಟಿ ರಸ್ತೆಗೆ ಎಸೆಯಲ್ಪಟ್ಟು ಸ್ಥಳದಲ್ಲೇ ಸಾವನ್ನಪ್ಪಿದರು. ವಿಶ್ವನಾಥ್ ಅವರ ಕೈಕಾಲುಗಳಿಗೆ ಗಂಭೀರ ಗಾಯಗಳಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಾರು ಚಾಲಕ ಹಳೆಯಂಗಡಿಯ ಮುಹಮ್ಮದ್ ತೌಫೀಕ್ ಎಂದು ಗುರುತಿಸಲಾಗಿದ್ದು, ಆತನನ್ನು ಸಂಚಾರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಂಗಳೂರು ಉತ್ತರ ಸಂಚಾರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಮುಂದಿನ ಕಾನೂನು ಕ್ರಮಗಳ ಕೈಗೊಳ್ಳಲಾಗಿದೆ.