ಉಡುಪಿ, ಸೆ. 09 (DaijiworldNews/AA): ಮಣಿಪಾಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕಳೆದ 16 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ರಾಜೇಶ್ ಕುಮಾರ್ ಎಂದು ಗುರುತಿಸಲಾಗಿದೆ. ಆರೋಪಿಯನ್ನು ಸೆಪ್ಟೆಂಬರ್ 7ರಂದು ಬೆಂಗಳೂರಿನ ಬನಶಂಕರಿ, ಇಟ್ಟಮಡು ಎಂಬಲ್ಲಿ ಪತ್ತೆ ಹಚ್ಚಿ ವಶಕ್ಕೆ ಪಡೆಯಲಾಗಿದೆ. ಮಣಿಪಾಲ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಮಹೇಶ್ ಪ್ರಸಾದ್ ಅವರ ಮಾರ್ಗದರ್ಶನದಲ್ಲಿ, ಸಬ್ ಇನ್ಸ್ಪೆಕ್ಟರ್ ಅಕ್ಷಯ ಕುಮಾರಿ ನೇತೃತ್ವದಲ್ಲಿ ಈ ಬಂಧನ ಕಾರ್ಯಾಚರಣೆ ನಡೆಸಲಾಗಿದೆ.
ಪೊಲೀಸ್ ಸಿಬ್ಬಂದಿಗಳಾದ ರಾಜೇಶ್ ಮತ್ತು ಮಂಜುನಾಥ್ ಹಾವಂಜೆ ಅವರು ಆರೋಪಿಯನ್ನು ಯಶಸ್ವಿಯಾಗಿ ಬಂಧಿಸಿ, ಅಧಿಕಾರಿಗಳ ಮುಂದೆ ಹಾಜರುಪಡಿಸಿದ್ದಾರೆ.