ಉಡುಪಿ, ಸೆ. 09 (DaijiworldNews/AA): ಜ್ಯುವೆಲರಿ ವರ್ಕ್ ಶಾಪ್ ವೊಂದಕ್ಕೆ ನುಗ್ಗಿದ ಕಳ್ಳರು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ದೋಚಿದ ಘಟನೆ ಉಡುಪಿ ನಗರದ ಚಿತ್ತರಂಜನ್ ಸರ್ಕಲ್ ಬಳಿ ಸೋಮವಾರ(ಸೆ. 8ರಂದು) ತಡರಾತ್ರಿ ನಡೆದಿದೆ.



ಚಿತ್ತರಂಜನ್ ಸರ್ಕಲ್ ಬಳಿ ಇರುವ 'ವೈಭವ ರಿಫೈನರ್' ಎಂಬ ಚಿನ್ನ ಮತ್ತು ಬೆಳ್ಳಿ ಕರಗಿಸುವ ಅಂಗಡಿಯಲ್ಲಿ ಕಳ್ಳತನವಾಗಿದೆ. ದುಷ್ಕರ್ಮಿಗಳು ನಕಲಿ ಕೀ ಬಳಸಿ ಅಂಗಡಿಯೊಳಗೆ ಪ್ರವೇಶಿಸಿದ್ದಾರೆ. ನಕಲಿ ಬೀಗಗಳನ್ನು ಬಳಸಿ ಡ್ರಾವರ್ ತೆರೆದಿದ್ದಾರೆ. ಅದರಲ್ಲಿದ್ದ ಸುಮಾರು 600 ಗ್ರಾಂ ಚಿನ್ನದ ಗಟ್ಟಿ, ಗೋಲ್ಡ್ ಲಿಕ್ವಿಡ್ ಮತ್ತು ಇತರ ಬೆಲೆಬಾಳುವ ವಸ್ತುಗಳನ್ನು ಕಳ್ಳತನ ಮಾಡಿದ್ದಾರೆ.
ಈ ಕೃತ್ಯದಲ್ಲಿ ಅಂಗಡಿಯ ಮಾಜಿ ಕೆಲಸಗಾರರ ಕೈವಾಡವಿರುವ ಬಗ್ಗೆ ಪೊಲೀಸರು ಶಂಕಿಸಿದ್ದಾರೆ.
ಉಡುಪಿ ಡಿವೈಎಸ್ಪಿ ಪ್ರಭು ಡಿ.ಟಿ ಮತ್ತು ಉಡುಪಿ ನಗರ ಠಾಣೆಯ ಇನ್ಸ್ಪೆಕ್ಟರ್ ಮಂಜುನಾಥ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ.