ಕಾಸರಗೋಡು, ಸೆ. 11 (DaijiworldNews/TA): ಮೊಗ್ರಾಲ್ ಪುತ್ತೂರಿನಲ್ಲಿ ಗುರುವಾರ ಮಧ್ಯಾಹ್ನ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕಾರ್ಯದ ಸಮಯದಲ್ಲಿ ಕ್ರೇನ್ ಕುಸಿದು ಬಿದ್ದ ಪರಿಣಾಮ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ ದುರಂತ ಘಟನೆ ನಡೆದಿದೆ.


ಮೃತರನ್ನು ಕೋಝಿಕ್ಕೋಡ್ನ ವಡಗರದ ಅಕ್ಷಯ್ (30) ಮತ್ತು ಅಶ್ವಿನ್ (30) ಎಂದು ಗುರುತಿಸಲಾಗಿದೆ. ಅಕ್ಷಯ್ ಕುಂಬಳೆ ಆಸ್ಪತ್ರೆಯಲ್ಲಿ ನಿಧನರಾದರೆ, ಅಶ್ವಿನ್ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು.
ಹೆದ್ದಾರಿಯಲ್ಲಿ ಕ್ರೇನ್ ಬಳಸಿ ವಿದ್ಯುತ್ ದೀಪಗಳನ್ನು ಅಳವಡಿಸುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಇಬ್ಬರೂ ಕ್ರೇನ್ ಬಾಕ್ಸ್ ಒಳಗೆ ಕೆಲಸ ಮಾಡುತ್ತಿದ್ದಾಗ ಅದು ಇದ್ದಕ್ಕಿದ್ದಂತೆ ಬೇರ್ಪಟ್ಟು ಸರ್ವಿಸ್ ರಸ್ತೆಗೆ ಬಿದ್ದಿದೆ. ಈ ಕಾರಣದಿಂದ ಅವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದರೂ, ಜೀವ ಉಳಿಸಲು ಸಾಧ್ಯವಾಗಲಿಲ್ಲ.