ಉಡುಪಿ, ಸೆ. 11 (DaijiworldNews/TA): ಉಡುಪಿ ಸಿಇಎನ್ (ಅಪರಾಧ ಮತ್ತು ಆರ್ಥಿಕ ಮಾದಕ ದ್ರವ್ಯ) ಪೊಲೀಸರು ಗುರುವಾರ, ಉಡುಪಿಯ ಕಿನ್ನಿಮುಲ್ಕಿ ಬಳಿ ಲಾರಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಗಣನೀಯ ಪ್ರಮಾಣದ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.











ಉಡುಪಿಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಲಾರಿಯನ್ನು ಕಿನ್ನಿಮುಲ್ಕಿ ಬಳಿ, ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಪೊಲೀಸರು ತಡೆದು ತಪಾಸಣೆ ನಡೆಸಿದ್ದಾರೆ. ಈ ವೇಳೆ ಲಾರಿಯೊಳಗೆ ಬಚ್ಚಿಟ್ಟಿದ್ದ 65 ಕಿಲೋಗ್ರಾಂಗಳಷ್ಟು ಗಾಂಜಾವನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಅಕ್ರಮ ಗಾಂಜಾ ಸಾಗಾಟ ಮೂಲವನ್ನು ಪತ್ತೆಹಚ್ಚಲು ಮತ್ತು ಜಾಲದಲ್ಲಿ ಭಾಗಿಯಾಗಿರುವ ಇತರರನ್ನು ಪತ್ತೆಹಚ್ಚುವ ಸಲುವಾಗಿ ಹೆಚ್ಚಿನ ತನಿಖೆ ನಡೆಯುತ್ತಿದೆ.