ಮಂಗಳೂರು, ಸೆ. 13 (DaijiworldNews/AA): ಪ್ರತಿಭೆಗಳನ್ನು ಗುರುತಿಸುವಲ್ಲಿ ನಂ.1 ಚಾನೆಲ್ ಆದ ಜೀ಼ ಕನ್ನಡ ವಾಹಿನಿ ಈಗ ಮತ್ತೊಮ್ಮೆ ಪ್ರತಿಭಾನ್ವಿತ ಕಲಾವಿದರಿಗೆ ಅವಕಾಶ ಕೊಡುತ್ತಿದೆ. ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಮತ್ತು ಕಾಮಿಡಿ ಕಿಲಾಡಿಗಳು ಆಡಿಷನ್ 31 ಜಿಲ್ಲೆಗಳಲ್ಲಿ ನಡೆಯುತ್ತಿದ್ದು, ನೀವು ಮುಂದಿನ ಡ್ಯಾನ್ಸಿಂಗ್ ಅಥವಾ ಕಾಮಿಡಿ ಕಿಂಗ್ ಆಗಬೇಕು ಅಂದ್ರೆ ಇಲ್ಲಿದೆ ನೋಡಿ ಸುವರ್ಣಾವಕಾಶ.

ಪ್ರತಿಭೆ ಇದ್ದರೂ ಅವಕಾಶ ಸಿಗದೇ ಇರುವವವರಿಗೆ ಜೀ಼ಕನ್ನಡ ಒಂದು ಅತ್ಯುತ್ತಮ ವೇದಿಕೆ ಕಲ್ಪಿಸಿಕೊಡುತ್ತಿದೆ. ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಭಾಗವಹಿಸುವವರ ವಯೋಮಿತಿ 6 ರಿಂದ 60 ರವರೆಗೆ ಇರಬೇಕು ಮತ್ತು ನೀವು ಉತ್ತಮವಾಗಿ ಡ್ಯಾನ್ಸ್ ಮಾಡುವವರಾಗಿರಬೇಕು. ಇನ್ನು, ಕಾಮಿಡಿ ಕಿಲಾಡಿಗಳಲ್ಲಿ ಭಾಗವಹಿಸುವುದಾದರೆ ನಿಮ್ಮ ವಯಸ್ಸು 16 ರಿಂದ 60 ವರುಷದ ಒಳಗಿರಬೇಕು ಮತ್ತು ನಿಮ್ಮದೇ ಕಾಮಿಡಿ ಸ್ಕಿಟ್ ಇರಬೇಕು.
ರೀಲ್ಸ್ ವಿಡಿಯೋಗಳಿಗೆ ಅವಕಾಶವಿಲ್ಲ. ಸೆಪ್ಟೆಂಬರ್ 15 ಸೋಮವಾರದಂದು ಬೆಳಗ್ಗೆ 9 ಗಂಟೆಗೆ, ಮಂಗಳೂರಿನ ಕೊಡಿಯಾಲಬೈಲ್ ನ ಶಾರದ ವಿದ್ಯಾಲಯ(ಕೇಂದ್ರ ಪಠ್ಯಕ್ರಮ ಆಧಾರಿತ)ದಲ್ಲಿ ಆಡಿಷನ್ ನಡೆಯಲಿದೆ. ಈ ಪ್ರಕ್ರಿಯೆಯಲ್ಲಿ ಭಾಗವಹಿಸಲು ಇಚ್ಚಿಸುವವರು ಪಾಸ್ಪೋರ್ಟ್ ಸೈಜ್ ಪೋಟೋ ಹಾಗೂ ಅಡ್ರೆಸ್ ಪ್ರೂಪ್ ಜೆರಾಕ್ಸ್ ಜೊತೆಗೆ ಬನ್ನಿ.
ಜೀ಼ಕನ್ನಡ ವಾಹಿನಿಯಲ್ಲಿ ಆಡಿಷನ್ ಗಳಿಗೆ ಯಾವುದೇ ಶುಲ್ಕ ಕಟ್ಟುವಂತಿಲ್ಲ. ವಾಹಿನಿಯ ಹೆಸರಿನಲ್ಲಿ ಹಣ ಪಡೆಯುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ವಾಹಿನಿಯು ತಿಳಿಸಿದೆ.