ಮಂಗಳೂರು, ಸೆ. 15 (DaijiworldNews/AA): ಕರ್ನಾಟಕ ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ಕೊಡಮಾಡುವ 2025-26ನೇ ಸಾಲಿನ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ದಕ್ಷಿಣ ಕನ್ನಡದ ಕಂಕನಾಡಿ, ನಂತೂರು, ಪದವು ಕಲ್ವರಿಯ ಸಂತ ಜೋಸೆಫರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕಿ ಐರಿನ್ ಲೀನಾ ಸಿಕ್ಕೇರಾ ಅವರಿಗೆ ಪ್ರದಾನ ಮಾಡಲಾಯಿತು.









ಈ ಪ್ರಶಸ್ತಿ ಪ್ರದಾನ ಸಮಾರಂಭವು ಹಾವೇರಿ ಜಿಲ್ಲೆಯ ರಾಣೇಬೆನ್ನೂರಿನ ಪಿ.ಬಿ.ರಸ್ತೆಯಲ್ಲಿರುವ ಮೃತ್ಯುಂಜಯ ಸಭಾ ಭವನದಲ್ಲಿ ಸೆ. 14ರಂದು ನಡೆಯಿತು. ಈ ಸಮಾರಂಭದಲ್ಲಿ ಶಿಕ್ಷಕ ವೃತ್ತಿಯಲ್ಲಿ ಉತ್ತಮ ಸೇವೆ ಸಲ್ಲಿಸಿದ ರಾಜ್ಯದ ವಿವಿಧ ಜಿಲ್ಲೆಗಳ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಈ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಾಜ್ಯ ಶಿಕ್ಷಣ ಸಚಿವ ಹಾಗೂ ವಿಧಾನಪರಿಷತ್ತಿನ ಸಭಾಪತಿಗಳು ಶಾಸಕರುಗಳು ಹಾಗೂ ಇಲಾಖಾ ಅಧಿಕಾರಿಗಳ ಸಮ್ಮುಖದಲ್ಲಿ 2025-26ನೇ ಸಾಲಿನ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಶಿಕ್ಷಕರಿಗೆ ಪ್ರದಾನ ಮಾಡಲಾಯಿತು.
ಐರಿನ್ ಲೀನಾ ಸಿಕ್ವೇರಾ ಅವರು ಶಿಕ್ಷಕ ವೃತ್ತಿಯಲ್ಲಿ ಅಮೋಘ ಸೇವೆ ಸಲ್ಲಿಸಿರುತ್ತಾರೆ. ತಮ್ಮ ಸೇವಾ ಅವಧಿಯಲ್ಲಿ ವಿದ್ಯಾರ್ಥಿಗಳು ಮತ್ತು ಪೋಷಕರ ಮೆಚ್ಚುಗೆಗೆ ಪಾತ್ರರಾಗಿದ್ದು ಇವರ ಮಹಾನ್ ಸೇವೆಯನ್ನು ಪುರಸ್ಕರಿಸಿ ಅವರಿಗೆ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.