ಕಾರ್ಕಳ, ಸೆ. 30 (DaijiworldNews/AA): ಮಹಿಳೆಗೆ ಮಾರಕಾಸ್ತ್ರ ತೋರಿಸಿ ಆಕೆಯನ್ನು ಬೆದರಿಸಿದ ಕಿಡಿಗೇಡಿಗಳು ಮೂರು ದನಗಳನ್ನು ಕಳ್ಳತನ ಮಾಡಿದ ಘಟನೆ ಕಾರ್ಕಳ ತಾಲೂಕಿನ ಕಾರ್ಕಳ ತಾಲೂಕಿನ ಶಿರ್ಲಾಲಿನಲ್ಲಿ ಸೆ. 28ರ ರಾತ್ರಿ ನಡೆದಿದೆ.


ಶಿರ್ಲಾಲಿನ ಜಯಶ್ರೀ ಎಂಬುವವರ ಮನೆಯಲ್ಲಿ ಈ ಘಟನೆ ನಡೆದಿದೆ. ಮನೆಯ ಹಟ್ಟಿಗೆ ನುಗ್ಗಿದ ಕಿಡಿಗೇಡಿಗಳು ಮೂರು ದನಗಳನ್ನು ಕದ್ದೊಯ್ದಿದ್ದಾರೆ.
ಘಟನೆ ವೇಳೆ ಮನೆಯಲ್ಲಿ ಮಹಿಳೆ ಒಬ್ಬರೇ ಇದ್ದರು. ಶಬ್ದ ಕೇಳಿ ಆಕೆ ಮನೆಯ ಹೊರಗೆ ಬಂದಾಗ, ವಾಹನದಲ್ಲಿ ಬಂದಿದ್ದ ಕಿಡಿಗೇಡಿಗಳು ಆಕೆಗೆ ಮಾರಕಾಸ್ತ್ರಗಳನ್ನು ತೋರಿಸಿ ಬೆದರಿಕೆ ಹಾಕಿ, ದನಗಳೊಂದಿಗೆ ಪರಾರಿಯಾಗಿದ್ದಾರೆ.
ಈ ಘಟನೆಯು ಸ್ಥಳೀಯ ನಿವಾಸಿಗಳಲ್ಲಿ ಆತಂಕ ಮೂಡಿಸಿದೆ. ಈ ಬಗ್ಗೆ ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.