ಮಂಗಳೂರು, ಅ.01 (DaijiworldNews/TA): ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ "ಮಂಗಳೂರು ದಸರಾ' ಶೋಭಾಯಾತ್ರೆ ಅ. 2ರಂದು ನಡೆಯಲಿದೆ. ಕ್ಷೇತ್ರದ ನವೀಕರಣದ ರೂವಾರಿ, ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಅವರ ಮಾರ್ಗದರ್ಶನದಲ್ಲಿ ಸಹಸ್ರ ಸಂಖ್ಯೆಯ ಭಕ್ತರ ಸಮ್ಮುಖದಲ್ಲಿ ಶೋಭಾಯಾತ್ರೆ ಆಯೋಜನೆಗೆ ಸಕಲ ಸಿದ್ಧತೆ ನಡೆಸಲಾಗಿದೆ.

ಸಂಜೆ 4ರಿಂದ ಶ್ರೀ ಶಾರದಾ ಮಾತೆಯ ಶೋಭಾಯಾತ್ರೆಯು ಶ್ರೀ ಕ್ಷೇತ್ರದಿಂದ ಹೊರಡಲಿದೆ. ಶ್ರೀ ಕ್ಷೇತ್ರದಲ್ಲಿ ನವರಾತ್ರಿ ಅಂಗವಾಗಿ ಪೂಜಿಸಲ್ಪಟ್ಟ ಶ್ರೀ ಮಹಾಗಣಪತಿ, ಆದಿಶಕ್ತಿ, ನವದುರ್ಗೆಯರು, ಶ್ರೀ ಶಾರದಾ ಮಾತೆ, ಬ್ರಹ್ಮಶ್ರೀ ನಾರಾಯಣ ಗುರುಗಳ ವಿಗ್ರಹ ಸಹಿತ ವರ್ಣರಂಜಿತ ದಸರಾ ಮೆರವಣಿಗೆ ನಗರದಲ್ಲಿ ಸಾಗಿಬರಲಿದೆ.
ಕುದ್ರೋಳಿ ಕ್ಷೇತ್ರದಿಂದ ಹೊರಟು ಕಂಬಾರ ರಸ್ತೆ, ಮಣ್ಣಗುಡ್ಡ ಮಾರ್ಗವಾಗಿ ಲೇಡಿಹಿಲ್ ಸರ್ಕಲ್, ಲಾಲ್ಬಾಗ್, ಬಳ್ಳಾಲ್ಬಾಗ್, ಪಿ.ವಿ.ಎಸ್. ಸರ್ಕಲ್, ಕೆ.ಎಸ್. ರಾವ್ ರಸ್ತೆ, ಹಂಪನಕಟ್ಟೆ, ವಿ.ವಿ. ಕಾಲೇಜು ವೃತ್ತದಿಂದ ಬಲಕ್ಕೆ ತಿರುಗಿ ಗಣಪತಿ ಹೈಸ್ಕೂಲ್ ಮಾರ್ಗವಾಗಿ ಶ್ರೀ ವೆಂಕಟರಮಣ ದೇವಸ್ಥಾನದ ಮುಂಭಾಗದಿಂದ ಕಾರ್ಸ್ಟ್ರೀಟ್, ಅಳಕೆ ಯಾಗಿ ಮತ್ತೆ ಶ್ರೀ ಕ್ಷೇತ್ರಕ್ಕೆ ತಲುಪಲಿದೆ. ಮಂಗಳೂರಿನ ಸುಮಾರು 9 ಕಿ.ಮೀ. ವ್ಯಾಪ್ತಿಯಲ್ಲಿ ಮೆರವಣಿಗೆ ಇರಲಿದೆ.