ಉಡುಪಿ, ಅ. 04 (DaijiworldNews/AA): ಉಡುಪಿ ನಗರಸಭೆಗೆ ಸೇರಿದ ಅಲೆವೂರು ಕಸ ವಿಲೇವಾರಿ ಘಟಕದಲ್ಲಿ ಶುಕ್ರವಾರ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಅಪಾರ ಪ್ರಮಾಣದ ಹಾನಿಯಾಗಿದೆ. ನಗರದ ತ್ಯಾಜ್ಯವನ್ನು ಸಂಗ್ರಹಿಸಿ ಸಂಸ್ಕರಿಸುವ ಈ ಘಟಕವು ಘಟನೆಯಿಂದ ತೀವ್ರವಾಗಿ ಹಾನಿಗೊಳಗಾಗಿದೆ.




ಅಗ್ನಿಶಾಮಕ ಮತ್ತು ತುರ್ತು ಸೇವಾ ಸಿಬ್ಬಂದಿ ಸ್ಥಳೀಯ ನಿವಾಸಿಗಳ ನೆರವಿನೊಂದಿಗೆ ಬೆಂಕಿಯನ್ನು ಹತೋಟಿಗೆ ತರುವಲ್ಲಿ ಯಶಸ್ವಿಯಾಗಿದ್ದಾರೆ.
ಮೂಲಗಳ ಪ್ರಕಾರ, ಕಸದ ರಾಶಿಯಿಂದಲೇ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಘಟನೆಯ ನಿಖರ ಪ್ರಮಾಣ ಇನ್ನಷ್ಟೇ ತಿಳಿದುಬರಬೇಕಿದೆ. ಅಪಾರ ಪ್ರಮಾಣದ ಹಾನಿಯಾಗಿದೆ ಎಂದು ಪ್ರಾಥಮಿಕ ವರದಿಗಳಿಂದ ತಿಳಿದುಬಂದಿದೆ.
ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.