ಬಂಟ್ವಾಳ, ಅ. 05 (DaijiworldNews/AA): ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯೊಬ್ಬರ ಕುತ್ತಿಗೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನದ ಸರವನ್ನು ಅಪರಿಚಿತ ಬೈಕ್ ಸವಾರನೋರ್ವ ಕಸಿದು ಪರಾರಿಯಾಗಿರುವ ಘಟನೆ ದಾಸಕೋಡಿ ಎಂಬಲ್ಲಿ ಅಕ್ಟೋಬರ್ 4ರ ಸಂಜೆ ನಡೆದಿದೆ.

ಬಾಳ್ತಿಲ ಗ್ರಾಮದ ಚೆಂಡೆ ನಿವಾಸಿ ಸರಸ್ವತಿ ಎಂಬುವರ ಕುತ್ತಿಗೆಯಲ್ಲಿದ್ದ ಸುಮಾರು ಎರಡು ಪವನ್ ತೂಕದ, ಅಂದಾಜು 2 ರೂ. ಲಕ್ಷ ಮೌಲ್ಯದ ಚಿನ್ನದ ಸರವನ್ನು ಕಳೆದುಕೊಂಡಿದ್ದಾರೆ.
ವರದಿಗಳ ಪ್ರಕಾರ, ಸರಸ್ವತಿಯವರು ಕಲ್ಲಡ್ಕ ಪೇಟೆಗೆ ತೆರಳಿ ಬಸ್ನಲ್ಲಿ ಮನೆಗೆ ಹಿಂತಿರುಗುತ್ತಿದ್ದರು. ದಾಸಕೋಡಿ ಪೆಟ್ರೋಲ್ ಪಂಪ್ ಬಸ್ ನಿಲ್ದಾಣದಲ್ಲಿ ಇಳಿದ ನಂತರ, ಅವರು ಹೆದ್ದಾರಿಯಲ್ಲಿ ತಮ್ಮ ಮನೆ ಕಡೆಗೆ ನಡೆದುಕೊಂಡು ಹೋಗುತ್ತಿದ್ದಾಗ, ಅಪರಿಚಿತ ವ್ಯಕ್ತಿಯೊಬ್ಬ ಬೈಕ್ನಲ್ಲಿ ಹಿಂದಿನಿಂದ ಬಂದು, ಅವರ ಕುತ್ತಿಗೆಯಲ್ಲಿದ್ದ ಸರವನ್ನು ಎಳೆದು ಮಾಣಿ ಕಡೆಗೆ ಪರಾರಿಯಾಗಿದ್ದಾನೆ.
ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.