ಬಂಟ್ವಾಳ, ಅ. 07 (DaijiworldNews/TA): ರಾಜ್ಯದಲ್ಲಿ ಪೋಲಿಸ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆ ಆದೇಶ ಹೊರಬಿದ್ದಿದ್ದು, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಪೋಲಿಸ್ ಇನ್ಸ್ ಪೆಕ್ಟರ್ ಶಿವಕುಮಾರ್ ಅವರು ಬೈದೂಂರು ಪೋಲಿಸ್ ಠಾಣೆಗೆ ವರ್ಗಾವಣೆ ಆಗಿದ್ದಾರೆ.

ಮೂಲತಃ ಸಾಗರ ತಾಲೂಕಿನವರಾದ ಇವರು ದ.ಕ.ಮತ್ತು ಉಡುಪಿ ಜಿಲ್ಲೆಯ ಅನೇಕ ಪೋಲಿಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ. ಬೆಳ್ತಂಗಡಿಯಿಂದ ವರ್ಗಾವಣೆಯಾದ ಇವರು ಕಳೆದ ಎರಡು ವರ್ಷಗಳಿಂದ ಬಂಟ್ವಾಳ ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಪೋಲಿಸ್ ಇನ್ಸ್ ಪೆಕ್ಟರ್ ಆಗಿ ಸೇವೆ ಸಲ್ಲಿಸಿದ್ದಾರೆ.