ಸುಳ್ಯ, ಅ. 09 (DaijiworldNews/AK):ಕೆಲವು ದಿನಗಳ ಬಿಡುವಿನ ಬಳಿಕ ಬುಧವಾರ ಸುಳ್ಯ ತಾಲೂಕಿನ ವಿವಿಧ ಭಾಗಗಳಲ್ಲಿ ಮಳೆಯಾಗಿದೆ. ಸುಳ್ಯ ತಾಲೂಕಿನ ವಿವಿಧೆಡೆಗಳಲ್ಲಿ ಬುಧವಾರ ಬೆಳಗ್ಗಿನಿಂದಲೇ ಮೋಡ ಕವಿದ ವಾತಾವರಣವಿದ್ದು ಮಧ್ಯಾಹ್ನದ ಬಳಿಕ ಗುಡುಗು ಸಿಡಿಲು ಸಹಿತ ಸಾಧಾರಣ ಮಳೆ ಸುರಿದಿದೆ.


ಕರಾವಳಿ ಹಾಗೂ ಒಳನಾಡಿನ ಕೆಲ ಪ್ರದೇಶದಲ್ಲಿ ಮುಂದಿನ ಕೆಲವು ದಿನಗಳ ಕಾಲ ಗುಡುಗು ಸಹಿತ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳಲ್ಲಿ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಹುತೇಕ ಭಾಗಗಳಲ್ಲಿ ಉತ್ತಮ ಮಳೆಯಾಗುವ ಸೂಚನೆ ಇದೆ. ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ಕೆಲವೆಡೆ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.