ಮಂಗಳೂರು, ಅ. 10 (DaijiworldNews/TA): ನಗರ ಅತೀ ವೇಗವಾಗಿ ಬೆಳವಣಿಗೆ ಕಾಣುತ್ತಿದ್ದು, ಅಂತಾರಾಷ್ರ್ಟ್ರೀಯ ನಗರವಾಗುವುದಕ್ಕೆ ಎಲ್ಲಾ ಅವಕಾಶಗಳಿವೆ. ಈ ನಿಟ್ಟಿನಲ್ಲಿ ಹೆಚ್ಚಿನ ಪ್ರೋತ್ಸಾಹ ನೀಡುವ ಅಗತ್ಯವಿದೆ ಎಂದು ದ.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

ಮಂಗಳೂರು ಮಹಾನಗರ ಪಾಲಿಕೆಯ ಮಂಗಳಾ ಸಭಾಂಗಣದಲ್ಲಿ ಮಾತನಾಡಿದ ಅವರು, ದಕ್ಷಿಣ ಕನ್ನಡದಲ್ಲಿ ಪ್ರವಾಸೋದ್ಯಮಕ್ಕೆ ವಿಫುಲ ಅವಕಾಶಗಳಿದೆ. ಕರಾವಳಿಯ ಪ್ರವಾಸೋದ್ಯಮವನ್ನು ಇನ್ನಷ್ಟು ಹೆಚ್ಚಿನ ಮಟ್ಟಕ್ಕೆ ತೆಗೆದುಕೊಂಡು ಹೋಗಬೇಕಿದೆ. ಇತರೆ ಕಡೆಗಳಿಂದ ಬಂದು ಇಲ್ಲಿ ಹೂಡಿಕೆ ಮಾಡುವಂಥ ಪಾರದರ್ಶಕ ವ್ಯವಸ್ಥೆ ನಿರ್ಮಾಣವಾಗಬೇಕು.
ಇಲ್ಲಿ ಪಿಪಿಪಿ ಮಾಡೆಲ್ ನಲ್ಲಿ ಸುಮಾರು 135 ಕೋಟಿ ರೂ. ವೆಚ್ಚದಲ್ಲಿ ಐಟಿ ಪಾರ್ಕ್ ನಿರ್ಮಾಣಕ್ಕೆ ಅನುಮೋದನೆ ಲಭಿಸಿದೆ. ಇಲ್ಲಿ ಕಾನೂನು ಸುವಸ್ಥೆಯನ್ನು ಹೆಚ್ಚಿನ ರೀತಿಯಲ್ಲಿ ಸುಧಾರಿಸಿ, ಇಲ್ಲಿ ಎಲ್ಲರಿಗೂ ಭದ್ರತೆ ಇದೆ ಎಂದು ತೋರಿಸಬೇಕಿದೆ. ಅಲ್ಲದೆ ಸದ್ಯ ಇಲ್ಲಿ ಸೌಹಾರ್ದ ವಾತಾವರಣ ನಿರ್ಮಾಣವಾಗುತ್ತಿದೆ ಎಂದು ಅವರು ತಿಳಿಸಿದರು.